ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ: ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆ ವಿದ್ಯಾರ್ಥಿಗೆ ದ್ವಿತೀಯ ಸ್ಥಾನ
National level volleyball tournament: ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆ ವಿದ್ಯಾರ್ಥಿಯು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಪುತ್ತೂರು (ಪಟ್ಟೆ ಬಡಗನ್ನೂರು): ವಿದ್ಯಾಭಾರತಿಯ 33ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಯು ಈಚೆಗೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಿತು.
17 ವರ್ಷ ವಯೋಮಾನದಲ್ಲಿ ಕರ್ನಾಟಕ ದಕ್ಷಿಣ ಮಧ್ಯ ಕ್ಷೇತ್ರ ತಂಡವನ್ನು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಯ 10ನೇ ತರಗತಿಯ ವಿದ್ಯಾರ್ಥಿ ಸಾಥ್ವಿ ಪ್ರತಿನಿಧಿಸಿ, ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿ ಹಾಗೂ ತರಬೇತಿ ನೀಡಿದ ದೈಹಿಕ ಶಿಕ್ಷಕ ಕಾರ್ಯಕ್ಕೆ ಪಟ್ಟೆ ವಿದ್ಯಾ ಸಂಸ್ಥೆಗಳ ಅಧ್ಯಕ್ಷರು, ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.