ನೀಟ್‌–ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ ಎಂದು ಸಚಿವರು ಹೇಳಿದ್ದಾರೆ.

May 12, 2026 - 20:29
ನೀಟ್‌–ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರದ ಚೆಲ್ಲಾಟ: ಲಕ್ಷ್ಮಿ ಹೆಬ್ಬಾಳಕರ್ ಆಕ್ರೋಶ

ಬೆಂಗಳೂರು, ಮೇ 12: ನೀಟ್‌  ಪರೀಕ್ಷೆ ಪ್ರಶ್ನೆ ಪತ್ರಿಕೆಯ ಸೋರಿಕೆಯಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ ಆಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದ್ದಾರೆ.

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಹಗಲಿರುಳು ಶ್ರಮಿಸಿ ಪರೀಕ್ಷೆ ಬರೆದಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ಅತಂತ್ರವಾಗಿದೆ.

ಒಂದು ದೇಶದ ಅತ್ಯುನ್ನತ ಪರೀಕ್ಷೆಗಳನ್ನು ಕೂಡ ಪಾರದರ್ಶಕವಾಗಿ ನಡೆಸಲಾಗದ ಕೇಂದ್ರ ಸರ್ಕಾರದ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಿಲ್ಲ. ಪರೀಕ್ಷಾ ಅಕ್ರಮಗಳು ಮತ್ತು ಆಡಳಿತಾತ್ಮಕ ಅಸಮರ್ಥತೆಯಿಂದಾಗಿ ಇಂದು ನಮ್ಮ ದೇಶದ ಪ್ರತಿಭಾವಂತ ವಿದ್ಯಾರ್ಥಿಗಳು ಬೀದಿಗೆ ಬೀಳುವಂತಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.