ನೇಪಾಳ ಪ್ರವಾಹ: ಸಂಕಷ್ಟದಲ್ಲಿರುವ ಭಾರತೀಯರಿಗೆ ತುರ್ತು ಸಹಾಯವಾಣಿ
Nepal Floods: ನೇಪಾಳದಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರಿಗೆ ನೆರವು ನೀಡಲು ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ.
ಬೆಂಗಳೂರು: ನೇಪಾಳದಲ್ಲಿ ಹಠಾತ್ ಪ್ರವಾಹ ಸಂಭವಿಸಿದ್ದು, ಸಂಕಷ್ಟಕ್ಕೆ ಸಿಲುಕಿರುವ ಭಾರತೀಯ ನಾಗರಿಕರಿಗೆ ನೆರವು ನೀಡಲು ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಪ್ರಕಟಿಸಲಾಗಿದೆ.
ನೇಪಾಳದಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ, ಕೆಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರತೀಯ ನಾಗರಿಕರೂ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆ, ನೆರವು ಅಥವಾ ಮಾಹಿತಿಯ ಅಗತ್ಯವಿರುವವರು ಕೆಳಗಿನ ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.
ತುರ್ತು ಸಹಾಯವಾಣಿ ಸಂಖ್ಯೆಗಳು:
+977 985 131 6807
+977 970 910 7500
+977 981 032 6117
ಈ ಎಲ್ಲಾ ತುರ್ತು ಸಹಾಯವಾಣಿ ಸಂಖ್ಯೆಗಳು WhatsApp ಮೂಲಕವೂ ಸಂಪರ್ಕಿಸಲು ಲಭ್ಯವಿವೆ.