Bajaj Pulsar 125: 2026ರ ಹೊಸ 'ಬಜಾಜ್ ಪಲ್ಸರ್ 125' ಬಿಡುಗಡೆ.. ಬೆಲೆ ಎಷ್ಟು?

2026 Bajaj Pulsar 125: ನೂತನ 2026ರ 'ಬಜಾಜ್ ಪಲ್ಸರ್ 125' ಬೈಕ್ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Aug 25, 2026 - 19:53
Bajaj Pulsar 125: 2026ರ ಹೊಸ 'ಬಜಾಜ್ ಪಲ್ಸರ್ 125' ಬಿಡುಗಡೆ.. ಬೆಲೆ ಎಷ್ಟು?

ನೂತನ 2026ರ ಬಜಾಜ್ ಪಲ್ಸರ್ 125 (Bajaj Pulsar 125) ಬೈಕ್ ಇಂದು ಅದ್ದೂರಿಯಾಗಿ ಬಿಡುಗಡೆಗೊಂಡಿದ್ದು, ಹಲವು ನವೀಕರಣಗಳಿಗೂ ಸಾಕ್ಷಿಯಾಗಿದೆ.  

ಈ ಮೋಟಾರ್‌ಸೈಕಲ್‌ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತದೆ. ರೂ.92,990 ರಿಂದ ರೂ.1,04,318 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಸ್ಟ್ಯಾಂಡರ್ಡ್ (Standard), ಸ್ಟ್ಯಾಂಡರ್ಡ್ ಸಿಂಗಲ್ ಸೀಟ್ (Standard Single Seat), ಸ್ಪ್ಲಿಟ್ ಸೀಟ್ (Split Seat) ಹಾಗೂ ಪ್ರೀಮಿಯಂ ಸ್ಪ್ಲಿಟ್ ಸೀಟ್ (Premium Split Seat) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿಯೂ ಸಿಗುತ್ತದೆ. 

ಇದು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ನವೀನವಾದ ಎಲ್ಇಡಿ ಹೆಡ್‌ಲ್ಯಾಂಪ್‌, ಸಿಗ್ನೇಚರ್ ಫ್ಯುಯೆಲ್ ಟ್ಯಾಂಕ್, ಟೈಲ್ ಲ್ಯಾಂಪ್‌ ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ. ಡಾರ್ಕ್ ಸಿಲ್ವರ್, ಎಬೊನಿ ಬ್ಲ್ಯಾಕ್ ಸಯಾನ್ ಬ್ಲೂ, ಎಬೊನಿ ಬ್ಲ್ಯಾಕ್ ಮೆಜೆಂಟಾ ರೆಡ್, ಫ್ಯೂರಿ ರೆಡ್ ಮತ್ತು ಸಫೈರ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 

ಹೊಸ 'ಪಲ್ಸರ್ 125' ಬೈಕ್ ಪವರ್‌ಟ್ರೇನ್‌ನ್ನು ಹೊಂದಿದೆ. 124.58-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 8,000 ಆರ್‌ಪಿಎಂನಲ್ಲಿ 11.8 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 6,000 ಆರ್‌ಪಿಎಂನಲ್ಲಿ 11 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 

ಈ ಬೈಕ್ ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. 5-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಗೂಗಲ್ ಮ್ಯಾಪ್ಸ್, ಐಡಲ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್ ಹಾಗೂ ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್‌ನ್ನು ತನ್ನದಾಗಿಸಿಕೊಂಡಿದೆ. ರೈನ್ (Rain), ರೋಡ್ (Road) ಮತ್ತು ಸ್ಪೋರ್ಟ್ (Sport) ರೈಡಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ. 

ಇದು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್‌ ಪಡೆದಿದೆ. ಜೊತೆಗೆ ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.