Toyota: ಟೊಯೊಟಾ ಹಿಲಕ್ಸ್ ಪಿಕ್ಅಪ್ ಬಿಡುಗಡೆ.. ಬೆಲೆ ಎಷ್ಟು?

New 2026 Toyota Hilux Launched: ಬಹುನಿರೀಕ್ಷಿತ 2026ರ ಟೊಯೊಟಾ ಹಿಲಕ್ಸ್ ಪಿಕ್ಅಪ್ ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Jul 29, 2026 - 12:54
Jul 29, 2026 - 15:41
Toyota: ಟೊಯೊಟಾ ಹಿಲಕ್ಸ್ ಪಿಕ್ಅಪ್ ಬಿಡುಗಡೆ.. ಬೆಲೆ ಎಷ್ಟು?

ಬಹುನಿರೀಕ್ಷಿತ 2026ರ ಟೊಯೊಟಾ ಹಿಲಕ್ಸ್ (Toyota Hilux) ಪಿಕ್ಅಪ್ ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ನವೀನ ವಿನ್ಯಾಸ ಹಾಗೂ ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. 

ಈ ಪಿಕ್ಅಪ್ ಟ್ರಕ್, ರೂ.32 ಲಕ್ಷದಿಂದ ರೂ.36.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಜಿಎಕ್ಸ್ 4X2 (GX 4X2), ಜಿಎಕ್ಸ್ 4X4 (GX 4X4) ಹಾಗೂ ವಿಎಕ್ಸ್ 4X4 (VX 4X4) ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಲಭ್ಯವಿದೆ. 

ಇದು ನೋಡಲು ತುಂಬಾ ಚೆನ್ನಾಗಿದ್ದು, ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಬಂಪರ್‌ನ್ನು ಹೊಂದಿದೆ. ಗ್ರಿಲ್ ಮೇಲ್ಭಾಗ  'ಟೊಯೊಟಾ' ಹೆಸರನ್ನು ಬರೆಯಲಾಗಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಪಡೆದಿದೆ. ಬ್ಲ್ಯಾಕ್ ಕಲರ್ ಡೋರ್ ಹ್ಯಾಂಡಲ್‌ಗಳು ಹಾಗೂ 17-ಇಂಚಿನ ಬ್ಲ್ಯಾಕ್ ಅಲಾಯ್ ವೀಲ್‌ಗಳನ್ನು ಹೊಂದಿದೆ. ಸಲ್ಫರ್ ಮೆಟಾಲಿಕ್, ಪ್ಲಾಟಿನಂ ಪರ್ಲ್ ವೈಟ್ ಮೆಟಾಲಿಕ್, ಆಟಿಟ್ಯೂಡ್ ಬ್ಲಾಕ್, ಆಶ್, ಎಮೋಷನ್ ರೆಡ್ & ಸೂಪರ್ ವೈಟ್ ಬಣ್ಣದೊಂದಿಗೆ ಲಭ್ಯವಿದೆ. 

ಹೊಸ 'ಟೊಯೊಟಾ ಹಿಲಕ್ಸ್' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 435 ಲೀಟರ್‌ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 

ಈ ಪಿಕ್ಅಪ್ ಟ್ರಕ್, ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 2.8-ಲೀಟರ್ ಡೀಸೆಲ್ (ಮೈಲ್ಡ್ ಹೈಬ್ರಿಡ್) ಎಂಜಿನ್ ಹೊಂದಿದ್ದು, 204 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 500 ಎನ್ಎಂ (ನ್ಯೂಟನ್ ಮೀಟರ್ ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 

ಇದು ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 12.3-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್,ವೈರ್‌ಲೆಸ್ ಫೋನ್ ಚಾರ್ಜರ್ ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಕನೆಕ್ಟ್ಡ್ ಕಾರ್ ಟೆಕ್, 8-ಸ್ಪೀಕರ್ ಸೌಂಡ್ ಸಿಸ್ಟಮ್‌ ಮತ್ತು ಮ್ಯಾನುವಲ್ ಕ್ಲೇಮೇಟ್ ಕಂಟ್ರೋಲ್ ಆಯ್ಕೆಯನ್ನು ಒಳಗೊಂಡಿದೆ. 

ನೂತನ 'ಹಿಲಕ್ಸ್' ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಫ್ರಂಟ್ ಡಿಸ್ಕ್ ಬ್ರೇಕ್‌ಗಳು, ಹಿಲ್ ಹೋಲ್ಡ್ ಕಂಟ್ರೋಲ್, ಮೆಕ್ಯಾನಿಕಲ್ ಪಾರ್ಕಿಂಗ್ ಬ್ರೇಕ್, ಫ್ರಂಟ್ - ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.