ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ

New Delhi: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.

Jul 29, 2026 - 20:47
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಆದೇಶದ ವಿರುದ್ಧ ಮೇಲ್ಮನವಿಗೆ ತೀರ್ಮಾನ: ಸಿಎಂ

ನವದೆಹಲಿ: ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ನೀಡಿರುವ ಆದೇಶದ ವಿರುದ್ಧ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಹೇಳಿದ್ದಾರೆ. 

ಕರ್ನಾಟಕ ಭವನದ ಬಳಿ ಇಂದು (ಬುಧವಾರ) ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ಬಾರಿ ವರುಣನ ಕೃಪೆ ಇಲ್ಲದಿರುವುದರಿಂದ, ಈ ಆದೇಶವನ್ನು ಪ್ರಶ್ನಿಸುವ ಕುರಿತು ಸಚಿವರಾದ ರಾಮಲಿಂಗಾರೆಡ್ಡಿ, ಅಡ್ವೊಕೇಟ್ ಜನರಲ್, ಕಾನೂನು ತಜ್ಞರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮೇಲ್ಮನವಿಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂದು ಹೇಳಿದರು. 

ಬೆಂಗಳೂರಿಗೆ ಮರಳಿದ ನಂತರ, ವಿರೋಧ ಪಕ್ಷದ ನಾಯಕರ ಜೊತೆಗೂ ಈ ಬಗ್ಗೆ ಚರ್ಚಿಸಲಾಗುವುದು. ಈ ಮಧ್ಯೆ ತಮಿಳುನಾಡು ಸಿಎಂ ವಿಜಯ್‌, ನನ್ನೊಂದಿಗೆ ಚರ್ಚಿಸಲು ಇಂಗಿತ ವ್ಯಕ್ತಪಡಿಸಿ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಜೊತೆಗೆ ನನ್ನ ಜೊತೆಗೆ ದೂರವಾಣಿ ಮೂಲಕವು ಮಾತನಾಡಿದ್ದಾರೆ. ನಾವು ಅವರಿಗೆ ನೀಡಬೇಕಾದ ಗೌರವ ನೀಡಿ, ಸಭೆಗೆ ಬನ್ನಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯಕ್ಕೆ ಬರುವ ಅತಿಥಿಗಳನ್ನು ಗೌರವದಿಂದ ಸ್ವೀಕರಿಸುವುದು ನಮ್ಮ ಕರ್ತವ್ಯ. ಹೀಗಾಗಿ ಆಹ್ವಾನಿಸಿದ್ದು, ಅದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು. 

ನಮ್ಮ ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿಯನ್ನು ಬಂದು ನೋಡಿ ಎಂದು ವಿಜಯ್ ಅವರಿಗೆ ಮನವಿ ಮಾಡಿದ್ದೇವೆ. ಅದಕ್ಕೆ ಅಗತ್ಯವಿರುವ ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಲಾಗುವುದು ಎಂದು ಹೇಳಿದ್ದೇನೆ. ಅವರಿಗೂ ವಾಸ್ತವ ಪರಿಸ್ಥಿತಿಯ ಅನುಭವ ಆಗಬೇಕು ಎಂದು ಹೇಳಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.