ನವದೆಹಲಿ: ಶಾಸಕ ಅಭಯ್ ಪಾಟೀಲ್ ಪ್ರಯಾಣಿಸುತ್ತಿದ್ದ ಕಾರಿಗೆ ಅಪಘಾತ.. 6 ಮಂದಿಗೆ ಗಾಯ
New Delhi: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು, ಭಾನುವಾರ ರಾತ್ರಿ ಅಪಘಾತಕ್ಕೀಡಾಗಿದೆ.
ನವದೆಹಲಿ: ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ (Abhay Patil) ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು, ಭಾನುವಾರ ರಾತ್ರಿ ಅಪಘಾತಕ್ಕೀಡಾಗಿದೆ.
ಈ ಘಟನೆಯಲ್ಲಿ ಅಭಯ್ ಪಾಟೀಲ್ ಸೇರಿದಂತೆ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಐಪಿ ಎಸ್ಟೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಬ್ಲ್ಯೂಡಿ ಕಚೇರಿ ಸಮೀಪ ರಾತ್ರಿ ಸುಮಾರು 9.30ಕ್ಕೆ ಅಪಘಾತವಾಗಿದೆ. ಪೋಲೀಸರ ಪ್ರಕಾರ, ಅಶುತೋಷ್ ಪಾಂಡೆ ಎಂಬವರ ಸ್ವಿಫ್ಟ್ ಕಾರು ಡಿವೈಡರ್‌ಗೆ ಡಿಕ್ಕಿಯಾಗಿ, ಆ ಬಳಿಕ ಎದುರಿನಿಂದ ಬರುತ್ತಿದ್ದ ಇನ್ನೋವಾಕ್ಕೆ ಗುದ್ದಿದೆ.
ಅಭಯ್ ಪಾಟೀಲ್ ಮತ್ತು ದೆಹಲಿಯ ಕಿರಾರಿ ಕ್ಷೇತ್ರದ ಶಾಸಕ ಅನಿಲ್ ಝಾ ಇನ್ನೋವಾ ಕಾರಿನಲ್ಲಿದ್ದರು. ಸದ್ಯ, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.