ನೂತನ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ: ಡಿಸಿಎಂ ಡಾ.ಜಿ.ಪರಮೇಶ್ವರ ಅಭಿನಂದನೆ
DCM Dr.G.Parameshwara: ನೂತನ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಇಂದು ನಡೆದಿದ್ದು, ಡಿಸಿಎಂ ಡಾ.ಜಿ.ಪರಮೇಶ್ವರ ಅಭಿನಂದನೆ ಸಲ್ಲಿಸಿದ್ದಾರೆ.
ಬೆಂಗಳೂರು: ವಿಕಾಸಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ವಿಧಾನ ಪರಿಷತ್ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ನೂತನವಾಗಿ ಚುನಾಯಿತರಾದ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಪಾಲ್ಗೊಂಡು, ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಶಿಕ್ಷಕರು ಮತ್ತು ಪದವೀಧರರು ಸಮಾಜದ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರ ಆಶೋತ್ತರಗಳಿಗೆ ಧ್ವನಿಯಾಗಿ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಹಾಗೂ ಪದವೀಧರ ಯುವಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ನೂತನ ಸದಸ್ಯರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿ. ವಿಧಾನ ಪರಿಷತ್ತಿನ ಘನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಮೂಲಕ ರಾಜ್ಯದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ನೂತನ ಸದಸ್ಯರು ತಮ್ಮದೇ ಆದ ಕೊಡುಗೆ ನೀಡಲಿ ಎಂದು ಡಾ.ಜಿ.ಪರಮೇಶ್ವರ ಹೇಳಿದರು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ಉಪಸಭಾಪತಿ ಉಮಾಶ್ರೀ, ಪರಿಷತ್ನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಉಪಸ್ಥಿತರಿದ್ದರು.