Tata Aeris: ನಾಳೆ ಬಿಡುಗಡೆ.. ಶೋರೂಂಗೆ ಬಂದೇ ಬಿಡ್ತು ಹೊಸ ಟಾಟಾ ಏರಿಸ್, ಬೆಲೆ ಎಷ್ಟಿರಲಿದೆ?

Tata Aeris: ಟಾಟಾ ಏರಿಸ್ ನಾಳೆ ಅದ್ದೂರಿಯಾಗಿ ಬಿಡುಗಡೆಯಾಗಲಿದ್ದು, ಸದ್ಯ ಈ ಕಾರನ್ನು ಶೋರೂಂಗೆ ತಲುಪಿಸವುದಕ್ಕೆ ಶುರು ಮಾಡಿದೆ. ಅದಕ್ಕೆ ಸಂಬಂಧಿಸಿದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿವೆ.

Sep 24, 2026 - 20:50
Sep 24, 2026 - 20:51
Tata Aeris: ನಾಳೆ ಬಿಡುಗಡೆ.. ಶೋರೂಂಗೆ ಬಂದೇ ಬಿಡ್ತು ಹೊಸ ಟಾಟಾ ಏರಿಸ್, ಬೆಲೆ ಎಷ್ಟಿರಲಿದೆ?

Tata Aeris: ಟಾಟಾ ಏರಿಸ್ ನಾಳೆ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕಾರಿನ ಬರುವಿಕೆಗಾಗಿ ಗ್ರಾಹಕರು ಕೂಡ ತುದಿಗಾಲಿನಲ್ಲಿ ನಿಂತುಕೊಂಡು ಕಾಯುತ್ತಿದ್ದಾರೆ. ಇದೊಂದು ಸೆಡಾನ್ ಆಗಿದ್ದು, ಸದ್ಯ ಕಂಪನಿಯು ಇದೇ 'ಏರಿಸ್'ನ್ನು ಶೋರೂಂಗೆ ತಲುಪಿಸವುದಕ್ಕೆ ಶುರು ಮಾಡಿದೆ. ಅದಕ್ಕೆ ಸಂಬಂಧಿಸಿದ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿವೆ. 

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನೀರಿಕ್ಷೆಯಿದೆ. ರೂ.6 ಲಕ್ಷ ಆರಂಭಿಕ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. 

ಈ ಸೆಡಾನ್ ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್ ಲ್ಯಾಂಪ್‌ಗಳು, ಕನೆಕ್ಟಡ್ ಎಲ್‌ಇಡಿ ಟೇಲ್‌ಲೈಟ್‌ಗಳು ಹಾಗೂ 15-ಇಂಚಿನ ಅಲಾಯ್ ವೀಲ್‌ಗಳನ್ನು ಹೊಂದಿದೆ. 

ನೂತನ 'ಟಾಟಾ ಏರಿಸ್' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿರಲಿದೆ. 1.2-ಲೀಟರ್, 3-ಸಿಲಿಂಡರ್, ನ್ಯಾಚುರಲಿ ಆಸ್ಪಿರೆಟೆಡ್ ರೆವೊಟ್ರಾನ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿರುವ ಎಲ್ಲ ಸಾಧ್ಯತೆಗಳಿವೆ. 28.06 ಕಿ.ಮೀ ವರೆಗೆ ಮೈಲೇಜ್ ನೀಡಬಹುದು ಎನ್ನಲಾಗಿದೆ. 

ಇದು 5 ಆಸನಗಳನ್ನು ಹೊಂದಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. 10.24-ಇಂಚಿನ ಫ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮ್ಯಾಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ರೇರ್ ಎಸಿ ವೆಂಟ್ಸ್ ಹಾಗೂ ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿರುವ ನಿರೀಕ್ಷೆಯಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಚಿತ್ರಕೃಪೆ: Autobros_india

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.