Tata Sierra EV: 665 ಕಿ.ಮೀ ರೇಂಜ್.. ಹೊಸ ಟಾಟಾ ಸಿಯೆರಾ ಇವಿ ಕುರಿತ ಪ್ರಮುಖಾಂಶಗಳಿವು

New Tata Sierra EV Price, Variants, Design, Colours, Range, Features And All Details । ಹೊಚ್ಚ ಹೊಸ ಟಾಟಾ ಸಿಯೆರಾ ಇವಿ ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಬನ್ನಿ.. ಈ ಕಾರಿನ ವಿಶೇಷತೆಗಳು ಏನೆಂಬುದನ್ನು ತಿಳಿಯೋಣ.

Jul 1, 2026 - 13:23
Jul 1, 2026 - 13:29
Tata Sierra EV: 665 ಕಿ.ಮೀ ರೇಂಜ್.. ಹೊಸ ಟಾಟಾ ಸಿಯೆರಾ ಇವಿ ಕುರಿತ ಪ್ರಮುಖಾಂಶಗಳಿವು

ಹೊಚ್ಚ ಹೊಸ ಟಾಟಾ ಸಿಯೆರಾ ಇವಿ (Tata Sierra EV) ಮಂಗಳವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಈಗಾಗಲೇ ಬುಕ್ಕಿಂಗ್‌ನ್ನು ತೆರೆಯಲಾಗಿದ್ದು, ಜುಲೈ 15 ರಿಂದ ವಿತರಣೆಗಳು ಶುರುವಾಗಲಿದೆ. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಅತ್ಯಾಧುನಿಕ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ.
ಬೆಲೆ & ರೂಪಾಂತರಗಳು (Price & Variants):
 
ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.18.79 ಲಕ್ಷದಿಂದ ರೂ.25.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಪ್ಯೂರ್, ಪ್ಯೂರ್ ಎಸ್, ಅಡ್ವೆಂಚರ್, ಎಂಪವರ್ಡ್ ಮತ್ತು ಎಂಪವರ್ಡ್ ಎ ಎಂಬ ರೂಪಾಂತರದ ಆಯ್ಕೆಯಲ್ಲಿ ಲಭ್ಯವಿದೆ. 
 
ವಿನ್ಯಾಸ, ಬಣ್ಣಗಳು & ಸುತ್ತಳತೆ (Design, Colours & Dimensions):
 
ನೂತನ 'ಟಾಟಾ ಸಿಯೆರಾ ಇವಿ' ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಸಿಲೂಯೆಟ್ ರೂಪದಲ್ಲಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು, ಫ್ಲಾಟ್ ರೂಫ್‌ಲೈನ್, ಫ್ಲಶ್-ಫಿಟ್ಟಿಂಗ್ ಹ್ಯಾಂಡಲ್‌ಗಳು ಹಾಗೂ 19-ಇಂಚಿನ ಡುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. 
 
ಈ ಎಸ್‌ಯುವಿಯು ನೈನಿತಾಲ್ ನಾಕ್ಟರ್ನ್, ರಿಷಿಕೇಶ್ ರಾಪಿಡ್ಸ್, ಬೆಂಗಾಲ್ ರೂಜ್, ಅಂಡಮಾನ್ ಅಡ್ವೆಂಚರ್, ಪ್ರೈಸ್ಟೈನ್ ವೈಟ್, ಕೂರ್ಗ್ ಕ್ಲೌಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 4340 ಮಿಮೀ ಉದ್ದ, 4340 ಮಿಮೀ ಅಗಲ, 1841 ಮಿಮೀ ಎತ್ತರವಿದೆ. 205 ಮಿಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2730 ಮಿಮೀ ವೀಲ್‌ಬೇಸ್‌ನ್ನು ಹೊಂದಿದೆ.
 
ಆಸನ ಆಯ್ಕೆ & ಬೂಟ್ ಸ್ಪೇಸ್ (Seat Capacity & Boot Space): 
 
ಇದು 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 622 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ. 
 
ಕಾರ್ಯಕ್ಷಮತೆ (Performance): 
 
ಹೊಸ 'ಟಾಟಾ ಸಿಯೆರಾ ಇವಿ' ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಹೊಂದಿದೆ. 63 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 565 ರಿಂದ 665 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. ಬರೀ 5.8 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಆಲ್ ವೀಲ್ ಡ್ರೈವ್ ಹಾಗೂ ರೇರ್ ವೀಲ್ ಡ್ರೈವ್ ಟೆಕ್ನಾಲಜಿಯನ್ನು ಬೆಂಬಲಿಸುತ್ತದೆ. 
 
ವೈಶಿಷ್ಟ್ಯಗಳು (features):
 
ಈ ಕಾರು ನಾನಾ ಬಗೆಯ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್ (ಡಿಜಿಟಲ್ ಡ್ರೈವರ್ ಡಿಸ್​ಪ್ಲೇ, ಟಚ್‌ಸ್ಕ್ರೀನ್ ಸೆಂಟ್ರಲ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಪ್ಯಾಸೆಂಜರ್ ಸೈಡ್ ಡಿಸ್​ಪ್ಲೇ), ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಪನೋರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ 12-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 
 
ಸುರಕ್ಷತಾ ವೈಶಿಷ್ಟ್ಯಗಳು (Safety Features): 
 
ಇದು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಡಿಸ್ಕ್‌ಬ್ರೇಕ್‌ಗಳು ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.