ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಉಡುಪಿ ತಾಲೂಕಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆಯಲಾಗಿದೆ.

Oct 12, 2024 - 07:12
ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಉಡುಪಿ, ಅ.12: ರಾಜಧಾನಿ ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆಗಳ ಬಂಧನ ಕಾರ್ಯಾಚರಣೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಲಾಗಿದ್ದು ದೆಹಲಿಯಲ್ಲಿ ಐವರು, ರಾಜಸ್ಥಾನದಲ್ಲಿ ಮೂವರು, ಉತ್ತರ ಪ್ರದೇಶದಲ್ಲಿ ಇಬ್ಬರು ಪಾಕ್‌ ಪ್ರಜೆಗಳನ್ನು ಬಂಧಿಸಲಾಗಿದೆ. ಇದರ ನಡುವೆ ಇದೀಗ ಉಡುಪಿಯ ಮಲ್ಪೆಯಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿಯರನ್ನು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಭಾರತಕ್ಕೆ ನುಸುಳುಕೋರರ ಆತಂಕ ಎದುರಾಗಿದೆ.

ಮೀನುಗಾರಿಕಾ ಕಾರ್ಮಿಕರಾಗಿ ಉದ್ಯೋಗ ಅರಿಸಿಕೊಂಡು ಬಂದಿದ್ದ ಬಾಂಗ್ಲಾದೇಶೀಯರನ್ನು ಉಡುಪಿ ತಾಲೂಕಿನ ಮಲ್ಪೆ ವಡಬಾಂಡೇಶ್ವರ ಬಸ್ ನಿಲ್ದಾಣ ಬಳಿ ವಶಕ್ಕೆ ಪಡೆಯಲಾಗಿದೆ. ಮೊದಲಿಗೆ ಮಹಮ್ಮದ್ ಮಾಣಿಕ್ ಎಂಬ ವ್ಯಕ್ತಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ. ಆಗ ಬಾಂಗ್ಲಾದೇಶದ ಇಮಿಗ್ರಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿತ್ತು. ಬಳಿಕ ಈತನ ವಿಚಾರಣೆ ವೇಳೆ ಇನ್ನೂ ಹಲವರು ಮಲ್ಪೆಯಲ್ಲಿರುವುದು ತಿಳಿದುಬಂದಿದೆ. ಸದ್ಯ ಈಗ ಮಲ್ಪೆಯಲ್ಲಿ ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಸೇರಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.ಈ ಆರೋಪಿಗಳು ನಕಲಿ ಭಾರತೀಯ ದಾಖಲಾತಿ ಸೃಷ್ಟಿಸಿ ಉಡುಪಿಗೆ ಪ್ರವೇಶಿಸಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿಗಳ ಪೈಕಿ ಸಿಕ್ಕಿಂ ಅಗರ್ತಲಾದ ಕಾಜೋಲ್ ಎಂಬಾತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾನೆಂದು ತಿಳಿದುಬಂದಿದೆ. ಹಾಗೂ ಆರೋಪಿಗಳ ಪೈಕಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ ಎಂದು ತಿಳಿದುಬಂದಿದೆ. ಸದ್ಯ ಮಲ್ಪೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.