Nissan Tekton: ಹೊಸ ನಿಸ್ಸಾನ್ ಟೆಕ್ಟಾನ್ ಮಾರಾಟಕ್ಕೆ.. ಬೆಲೆ ಎಷ್ಟು?

Nissan Tekton Suv Launched In India, Rs 10.49 Lakh Starting Price, Details: 2026ರ ಹೊಸ ನಿಸ್ಸಾನ್ ಟೆಕ್ಟಾನ್ ಎಸ್‌ಯುವಿ ಗುರುವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.

Jul 10, 2026 - 13:12
Nissan Tekton: ಹೊಸ ನಿಸ್ಸಾನ್ ಟೆಕ್ಟಾನ್ ಮಾರಾಟಕ್ಕೆ.. ಬೆಲೆ ಎಷ್ಟು?

2026ರ ಹೊಸ ನಿಸ್ಸಾನ್ ಟೆಕ್ಟಾನ್ (Nissan Tekton) ಎಸ್‌ಯುವಿ ಗುರುವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ರೂ.10.49 ಲಕ್ಷದಿಂದ ರೂ.18.59 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈಗಾಗಲೇ ಬುಕ್ಕಿಂಗ್ ಶುರುವಾಗಿದ್ದು, ರೂ.11,000 ಮುಂಗಡ ಹಣವನ್ನು ಪಾವತಿಸಿ, ಆರ್ಡರ್ ಮಾಡಬಹುದು. ಜುಲೈ 20 ರಿಂದ ವಿತರಣೆಗಳು ಶುರುವಾಗಲಿದೆ. 

ಈ ಕಾರು ವಿಸಿಯಾ, ವಿಸಿಯಾ ಪ್ಲಸ್, ಅಸೆಂಟಾ, ಎನ್-ಕನೆಕ್ಟಾ, ಟೆಕ್ನಾ ಹಾಗೂ ಟೆಕ್ನಾ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ಸಿಗುತ್ತದೆ. 

ಇದು ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ಬಂಪರ್ & ಗ್ರಿಲ್‌ನ್ನು ಪಡೆದಿದೆ. ಬೃಹದಾಕಾರದ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, 'ಸಿ' ಆಕಾರಕ್ಕೆ ಹೋಲಿಕೆಯಾಗಬಲ್ಲ ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು, ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು 18-ಇಂಚಿನ ಡ್ಯುಯಲ್-ಟೋನ್ ಅಲಾಯ್ ವೀಲ್‌ಗಳನ್ನು ಹೊಂದಿದೆ.

ನೂತನ 'ನಿಸ್ಸಾನ್ ಟೆಕ್ಟಾನ್' ಪರ್ಲ್ ವೈಟ್,  ಓನಿಕ್ಸ್ ಬ್ಲ್ಯಾಕ್, ಇಂಡಿಗೋ ಬ್ಲೂ, ಫ್ಲೇರ್ ಗಾರ್ನೆಟ್ ರೆಡ್, ಮೂನ್‌ಬೋ ಗ್ರೇ ಹಾಗೂ  ಬ್ಲೇಡ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 4348 ಮಿ.ಮೀ ಉದ್ದ, 1815 ಮಿ.ಮೀ ಅಗಲ ಮತ್ತು 1674 ಮಿ.ಮೀ ಎತ್ತರವಿದೆ. 2657 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ವಾರಾಂತ್ಯ ಹಾಗೂ ರಜಾ ದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 700 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 100 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 166 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19.4 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಮತ್ತೊಂದು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್, 163 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 280 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 6-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.8 ರಿಂದ 18.5 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 

ಹೊಸ 'ನಿಸ್ಸಾನ್ ಟೆಕ್ಟಾನ್' ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6-ಸ್ಪೀಕರ್ ಅರ್ಕಾಮಿಸ್ ಸೌಂಡ್ ಸಿಸ್ಟಮ್, ಕನೆಕ್ಟ್ಡ್ ಕಾರ್ ಟೆಕ್, ವೈರ್‌ಲೆಸ್ ಫೋನ್ ಚಾರ್ಜರ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಏರ್ ಪ್ಯೂರಿಫೈಯರ್, ಪನೋರಮಿಕ್ ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್, ಪವರ್ಡ್ ಟೈಲ್‌ಗೇಟ್, ಕೀಲೆಸ್ ಎಂಟ್ರಿ, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ. 

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಭಾರತ್ ಎನ್‌ಸಿಎಪಿಯಿಂದ 5-ಸ್ಟಾರ್ ರೇಟಿಂಗ್ ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಆಲ್-ವೀಲ್ ಡಿಸ್ಕ್‌ಬ್ರೇಕ್‌ಗಳು, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.