Mangaluru District: ದಕ್ಷಿಣ ಕನ್ನಡವನ್ನು ಮಂಗಳೂರು ಜಿಲ್ಲೆಯೆಂದು ಮರು ನಾಮಕರಣಗೊಳಿಸಲು ಅಧಿಸೂಚನೆ

Mangaluru District: ದಕ್ಷಿಣ ಕನ್ನಡವನ್ನು ಮಂಗಳೂರು ಜಿಲ್ಲೆಯನ್ನಾಗಿ ಮರು ನಾಮಕರಣಗೊಳಿಸುವ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

Oct 13, 2026 - 16:12
Oct 13, 2026 - 16:45
Mangaluru District: ದಕ್ಷಿಣ ಕನ್ನಡವನ್ನು ಮಂಗಳೂರು ಜಿಲ್ಲೆಯೆಂದು ಮರು ನಾಮಕರಣಗೊಳಿಸಲು ಅಧಿಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯನ್ನು ಮಂಗಳೂರು (Mangaluru) ಜಿಲ್ಲೆಯನ್ನಾಗಿ ಮರು ನಾಮಕರಣಗೊಳಿಸುವ ಕುರಿತು ರಾಜ್ಯ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. 

ಈ ಜಿಲ್ಲೆ ಹೆಸರನ್ನು 'ಮಂಗಳೂರು' ಎಂದು ಬದಲಿಸುವ ಬಗ್ಗೆ ಸಾರ್ವಜನಿಕರಿಂದ ಸಲಹೆ, ಅಭಿಪ್ರಾಯಗಳನ್ನು ಲಿಖಿತ/ ಇಮೇಲ್‌ ಮೂಲಕ ಆಹ್ವಾನಿಸಲಾಗಿದೆ. ಸಾರ್ವಜನಿಕರು ಮುಖ್ಯಮಂತ್ರಿಗಳ ಸಚಿವಾಲಯ, ಕಂದಾಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಥವಾ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಅಧಿಸೂಚನೆ ಪ್ರಕಟಗೊಂಡ 30 ದಿನದೊಳಗೆ ಸಲ್ಲಿಸಬಹುದಾಗಿದೆ. 

ಆ ಬಳಿಕ ಅಂತಿಮ ಆದೇಶ ಕೂಡ ಹೊರಬೀಳಲಿದ್ದು, ಅತಿ ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಹೆಸರು ಮಂಗಳೂರು ಆಗಿ ಬದಲಾಗಲಿದೆ.

ಸೆ.17 ರಂದು ದಕ್ಷಿಣ ಕನ್ನಡ ಜಿಲ್ಲೆಯ ಹೆಸರನ್ನು 'ಮಂಗಳೂರು' ಎಂದು ಮರು ನಾಮಕರಣಗೊಳಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಪ್ರಾಥಮಿಕ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.