ನ.22ಕ್ಕೆ ಜಿಲ್ಲಾ ಮಟ್ಟದ ಯುವಜನೋತ್ಸವ

District-level Youth Festival: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನ.22 ರಂದು ಕಡಬ ತಾಲೂಕಿನ ಸವಣೂರಿನಲ್ಲಿ ನಡೆಯಲಿದೆ.

Nov 16, 2026 - 19:07
Nov 16, 2026 - 19:07
ನ.22ಕ್ಕೆ ಜಿಲ್ಲಾ ಮಟ್ಟದ ಯುವಜನೋತ್ಸವ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವಜನೋತ್ಸವ ನ.22 ರಂದು ಕಡಬ ತಾಲೂಕಿನ ಸವಣೂರಿನಲ್ಲಿ ನಡೆಯಲಿದೆ.

ಬೆಳಗ್ಗೆ 9 ಗಂಟೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮೈ ಭಾರತ್ ದಕ್ಷಿಣ ಕನ್ನಡ, ಜಿಲ್ಲಾ ಯುವಜನ ಒಕ್ಕೂಟ, ಕಡಬ ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸವಣೂರು ಗ್ರಾಮ ಪಂಚಾಯತ್ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ ಸವಣೂರು ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಈ ಕಾರ್ಯಕ್ರಮದ ಆಯೋಜನೆಯಲ್ಲಿ ಕೈಜೋಡಿಸಿವೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.