ನ.30ಕ್ಕೆ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ ಉದ್ಘಾಟನೆ
Nadoja Dr.Kayyara Kinhanna Rai Kannada Bhavana: ನ.30ಕ್ಕೆ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ ಉದ್ಘಾಟನೆಯಾಗಲಿದೆ.
ಮಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ, ಕೇರಳದ ಕಾಸರಗೋಡು ಪೆರಡಾಲ ಬದಿಯಡ್ಕದಲ್ಲಿ ನೂತನವಾಗಿ ನಿರ್ಮಿಸಿದ 'ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ' ಉದ್ಘಾಟನೆ & 'ಗಡಿನಾಡ ಚೇತನ' ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ನ.30 ರಂದು ನಡೆಯಲಿದೆ.
ಅಂದು ಬೆಳಗ್ಗೆ 10ಕ್ಕೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. 11 ಗಂಟೆಗೆ ಆರೋಗ್ಯ ಸಚಿವ ಯು.ಟಿ ಖಾದರ್ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಭವನ ಉದ್ಘಾಟಿಸಲಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ 'ಕಾಸರಗೋಡಿನ ಕನ್ನಡ ಪ್ರಜ್ಞೆ' ಹಾಗೂ 'ಹೊರನಾಡು / ಗಡಿನಾಡು ಕನ್ನಡ ಭಾಷಿಕರು/ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಔದ್ಯೋಗಿಕ ಸವಲತ್ತುಗಳಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡಿರುವ ಆದೇಶಗಳ ಬಗ್ಗೆ' ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಬದಿಯಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷ ಡಿ.ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ.