ಮಂಗಳೂರು: 2026-27ನೇ ಸಾಲಿನಲ್ಲಿ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋರ್ಸ್‍ಗಳಲ್ಲಿ, ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ & ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು https://sevasindhu.karnataka.gov.in/Sevasindhu/DepartmentServices ಮೂಲಕ ಆನ್‍ಲೈನ್‍ನಲ್ಲಿ ಡಿ. 31ರೊಳಗೆ ಅರ್ಜಿ ಸಲ್ಲಿಸಬಹುದು. ಕೋರ್ಸ್‍ನ ಅವಧಿಗೆ ಒಂದು ಬಾರಿ ಮಾತ್ರ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಯ ಕುಟುಂಬದ ಒಟ್ಟು ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮಂಗಳೂರು (08242433078), ಬಂಟ್ವಾಳ (08255232470), ಬೆಳ್ತಂಗಡಿ (08256295335), ಪುತ್ತೂರು (08251237078), ಸುಳ್ಯ (08257230666) ಹಾಗೂ ಇಲಾಖೆಯ ವೆಬ್‍ಸೈಟ್ https://dom.karnataka.gov.in ಅಥವಾ ಸಹಾಯವಾಣಿ 8277799990ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.