ಒಬಿಸಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಪ್ರತಿಪಕ್ಷ ಬಯಸಿದೆ: ಪ್ರಧಾನಿ ಮೋದಿ
PM Narendra Modi: ಒಬಿಸಿ ಮೀಸಲಾತಿ ಕಡಿತಗೊಳಿಸಿ ಮುಸ್ಲಿಮರಿಗೆ ನೀಡಲು ಪ್ರತಿಪಕ್ಷ ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.
ನವದೆಹಲಿ: ಒಬಿಸಿ ಮೀಸಲಾತಿಯನ್ನು ಕಡಿತಗೊಳಿಸಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಪ್ರತಿಪಕ್ಷದ ಪ್ರಮುಖ ಪಕ್ಷ ಬಯಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಆರೋಪಿಸಿದ್ದಾರೆ.
ಸಂವಿಧಾನ ದಿನದ ಅಂಗವಾಗಿ ತಮ್ಮ ವೆಬ್‌ಸೈಟ್‌ನಲ್ಲಿ ಬರೆದ ಲೇಖನದಲ್ಲಿ, ಸಂವಿಧಾನ ರಚನಾಕಾರರು, ವಿಶೇಷವಾಗಿ ಡಾ. ಬಿ.ಆರ್. ಅಂಬೇಡ್ಕರ್, ಇಂತಹ ಮೀಸಲಾತಿ ನೀತಿಯನ್ನು ವಿರೋಧಿಸಿದ್ದರು. ಇದು ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಪ್ರತಿಪಕ್ಷದ ನಡವಳಿಕೆಯನ್ನು ಟೀಕಿಸಿದ ಅವರು, ಅದು ವಿರೋಧ ಪಕ್ಷವಾಗಿರುವುದಕ್ಕಿಂತ ಅಡ್ಡಿಪಡಿಸುವ ಪಕ್ಷವಾಗಿ ಬದಲಾಗುತ್ತಿದೆ. ಪ್ರಜಾಪ್ರಭುತ್ವದ ಪ್ರಕ್ರಿಯೆಗಳಿಗೆ ಅಡ್ಡಿಪಡಿಸುವುದು ಸಂವಿಧಾನಬದ್ಧ ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕೆ ಪರ್ಯಾಯವಲ್ಲ ಎಂದು ಟೀಕಿಸಿದ್ದಾರೆ.