ಪಂಜ: ಆಟಿ ನೆಂಪು-2026ರ ಆಮಂತ್ರಣ ಪತ್ರಿಕೆ ಬಿಡುಗಡೆ

Aati Nempu-2026: ಪಂಜದ ಲಯನ್ಸ್ ಸಭಾಭವನದಲ್ಲಿ 'ಆಟಿ ನೆಂಪು–2026' ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

Aug 1, 2026 - 15:14
ಪಂಜ: ಆಟಿ ನೆಂಪು-2026ರ ಆಮಂತ್ರಣ ಪತ್ರಿಕೆ ಬಿಡುಗಡೆ

ದಕ್ಷಿಣ ಕನ್ನಡ: ಪಂಜದ ಲಯನ್ಸ್ ಸಭಾಭವನದಲ್ಲಿ 'ಆಟಿ ನೆಂಪು–2026' ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಸಹಕಾರಿ ಧುರೀಣ ಜಾಕೆ ಮಾಧವ ಗೌಡ ಅವರು ಹೊರತಂದರು.  

ಈ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ತಮ್ಮ ಅಮೂಲ್ಯ ಸಮಯ, ಸಹಕಾರ ಮತ್ತು ಸಲಹೆ ಸೂಚನೆಗಳನ್ನು ನೀಡಿದ ಎಲ್ಲಾ ಸಂಘಟನೆಗಳ ಅಧ್ಯಕ್ಷರು & ಸದಸ್ಯರುಗಳಿಗೆ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ಜೆ.ಸಿ.ದೇವಿಪ್ರಸಾದ್ ಚಿಕ್ಮುಳಿ ಕೃತಜ್ಞತೆ ಸಲ್ಲಿಸಿದರು.

ನಿಮ್ಮೆಲ್ಲರ ಬೆಂಬಲ, ಮಾರ್ಗದರ್ಶನ ಹಾಗೂ ಒಗ್ಗಟ್ಟಿನ ಸಹಕಾರವೇ 'ಆಟಿ ನೆಂಪು–2026'ರ ಯಶಸ್ಸಿನ ಬುನಾದಿಯಾಗಲಿದೆ. ಪಂಜದ ಇತಿಹಾಸದಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತೆ ಈ ಕಾರ್ಯಕ್ರಮವನ್ನು ಮಾಡೋಣ ಎಂದು ಅವರು ಹೇಳಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.