ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿನಿ ಎತ್ತರ ಜಿಗಿತ ಸ್ಪರ್ಧೆ ಯಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನ
Patte Shree Krishna: ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿನಿ ಎತ್ತರ ಜಿಗಿತ ಸ್ಪರ್ಧೆ ಯಲ್ಲಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ
ಪಟ್ಟೆ ಬಡಗನ್ನೂರು: ಕಲಬುರ್ಗಿಯಲ್ಲಿ ಜು.30 ರಂದು ನಡೆದ ರಾಜ್ಯ ಮಟ್ಟದ ವಿದ್ಯಾಭಾರತಿ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಾನದ ಬಾಲಕಿಯರ ಎತ್ತರ ಜಿಗಿತ ಸ್ಪರ್ಧೆಯಲ್ಲಿ, ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ 8ನೇ ತರಗತಿ ವಿದ್ಯಾರ್ಥಿನಿ ಹರ್ಷಿಕಾ ಎಸ್ ತೃತೀಯ ಸ್ಥಾನ ಪಡೆದಿದ್ದಾರೆ.
ಈ ವಿದ್ಯಾರ್ಥಿನಿ ಬಡಕ್ಕೋಡಿ ಕೂಸಪ್ಪ ಮತ್ತು ಆಶಾಲತಾ ದಂಪತಿ ಸುಪುತ್ರಿ. ಎಳೆಯ ವಯಸ್ಸಿನಲ್ಲಿಯೇ ಸಾಧನೆ ಮಾಡಿ ಶಾಲೆಗೆ ಕೀರ್ತಿ ತಂದಿದ್ದಾರೆ. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರು, ಸರ್ವದಸ್ಯರು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.