Shrikrishna Institutions: ಕರ್ನಾಟಕ ವಾಲಿಬಾಲ್ ತಂಡಕ್ಕೆ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿ ನಾಯಕ.. ದ್ವಿತೀಯ ಸ್ಥಾನ
Patte Shrikrishna Institutions: ಕರ್ನಾಟಕ ವಾಲಿಬಾಲ್ ತಂಡಕ್ಕೆ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ.
ಪುತ್ತೂರು: ಇದೇ ಸೆ.6 ರಿಂದ 10 ರವರೆಗೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ಜರುಗಿದ ರಾಷ್ಟ್ರಮಟ್ಟದ 3ಎ ವಾಲಿಬಾಲ್ ಅಸೋಸಿಯೇಷನ್ ಆಫ್ ಕರ್ನಾಟಕ ಜೂನಿಯರ್ ವಾಲಿಬಾಲ್ ಪಂದ್ಯಾವಳಿಯಲ್ಲಿ, ರಾಜ್ಯ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ.
ಈ ತಂಡಕ್ಕೆ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿ 9ನೇ ತರಗತಿಯ ಪ್ರತ್ವಿಶ್ ಕನ್ನಾಯ ನಾಯಕತ್ವ ವಹಿಸಿದ್ದರು. ಇನ್ನೋರ್ವ ಆಟಗಾರನಾಗಿ ಅದೇ ತರಗತಿಯ ನಿಶ್ಮಿತ್ ಭಾಗವಹಿಸಿದ್ದರು.
ವಿದ್ಯಾ ಸಂಸ್ಥೆಯ ಕ್ರೀಡಾಂಗಣದಲ್ಲಿ ಈ ತಂಡಕ್ಕೆ 1 ವಾರಗಳ ಕಾಲ ಸಂಸ್ಥೆಯ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಅವರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಪಟ್ಟೆ, ಗೋಪಿನಾಥ್ & ಆಮಮ್ಸ್ ಮೂಡಡ್ಕದ ದೈಹಿಕ ಶಿಕ್ಷಣ ಶಿಕ್ಷಕ ರಫೀಕ್ ಆತೂರು ತರಬೇತಿಯನ್ನು ನೀಡಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.