ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧೀಜಿ & ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Patte Sri Krishna: ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

Oct 2, 2026 - 14:31
ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಮಹಾತ್ಮ ಗಾಂಧೀಜಿ & ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಪಟ್ಟೆ ಬಡಗನ್ನೂರು: 'ನಮ್ಮ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಯಾವಾಗಲೂ ಅಳವಡಿಸಿಕೊಳ್ಳಬೇಕು. ಅವರು ಸತ್ಯ ಮತ್ತು ಅಹಿಂಸೆಯ ಮಹತ್ವವನ್ನು ಇಡೀ ವಿಶ್ವಕ್ಕೆ ತಿಳಿಸಿಕೊಟ್ಟರು' ಎಂದು ಪಟ್ಟೆ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ಹೇಳಿದರು. 

ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಗಳ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.

ವೇದಿಕೆಯಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ ಮಾತಾಜಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್ ಹಾಗೂ ಅಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕಿ ಪುಷ್ಪಾವತಿ ಮಾತಾಜಿ ಉಪಸ್ಥಿತರಿದ್ದರು.

10ನೇ ತರಗತಿ ವಿದ್ಯಾರ್ಥಿನಿ ಯಶ್ವಿತಾ 'ಗಾಂಧಿ ಜಯಂತಿ'ಯ ಬಗ್ಗೆ ಮಾತುಗಳನ್ನಾಡಿದರು.

 ಶ್ರೀ ಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಮಾತಾಜಿ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ ಮಾತಾಜಿ ವಂದಿಸಿದರು. ಪ್ರೌಢಶಾಲಾ ಶಿಕ್ಷಕಿ ಶೈಲಾಶ್ರೀ ಮಾತಾಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.