ಪಟ್ಟೆ ಶ್ರೀ ಕೃಷ್ಣ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ

Puttur: ಉಸಿರಾಟ ನಿಂತಾಗ ಸಿಪಿಆರ್ ನೀಡುವ  ವಿಧಾನ, ಬಾಯಿಯಿಂದ ಬಾಯಿಗೆ ಉಸಿರಾಟ, ಎದೆ ಒತ್ತುವಿಕೆ ಮಾಡುವ ವಿಧಾನಗಳನ್ನು  ಪ್ರಾಯೋಗಿಕವಾಗಿ ತಿಳಿಸಲಾಯಿತು.

Jul 21, 2026 - 16:02
Jul 22, 2026 - 06:35
ಪಟ್ಟೆ ಶ್ರೀ ಕೃಷ್ಣ   ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ  ಪ್ರಥಮ ಚಿಕಿತ್ಸೆಯ ಬಗ್ಗೆ ತರಬೇತಿ

ಪಟ್ಟೆ ಬಡಗನ್ನೂರು: ಪಟ್ಟೆ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ, ಮಂಗಳೂರಿನ ಕೆಎಂಸಿ ಆಸ್ಪತ್ರೆ & ಪುತ್ತೂರಿನ ಪ್ರಗತಿ ಆಸ್ಪತ್ರೆ ಸಹಯೋಗದಲ್ಲಿ ಪ್ರಥಮ ಚಿಕಿತ್ಸೆ ಮತ್ತು ಸಿಪಿಆರ್ ಕುರಿತು ತರಬೇತಿ ಕಾರ್ಯಕ್ರಮ ನಡೆಸಲಾಯಿತು. ಈ ತರಬೇತಿಯಲ್ಲಿ ಅಪಘಾತ ಅಥವಾ ತುರ್ತು ಪರಿಸ್ಥಿತಿಯಲ್ಲಿ ಗಾಯಗೊಂಡ ವ್ಯಕ್ತಿಗೆ ತಕ್ಷಣ ನೀಡಬೇಕಾದ ಪ್ರಥಮ ಚಿಕಿತ್ಸೆಯ ಬಗ್ಗೆ ವಿವರವಾಗಿ ತಿಳಿಸಲಾಯಿತು.

ಉಸಿರಾಟ ನಿಂತಾಗ ಸಿಪಿಆರ್ ನೀಡುವ ವಿಧಾನ, ಬಾಯಿಯಿಂದ ಬಾಯಿಗೆ ಉಸಿರಾಟ ಹಾಗೂ ಎದೆ ಒತ್ತುವಿಕೆ ಮಾಡುವ ವಿಧಾನಗಳನ್ನು ಪ್ರಾಯೋಗಿಕವಾಗಿ ಹೇಳಿ ಕೊಡಲಾಯಿತು. ಪ್ಯಾರಾಮೆಡಿಕಲ್ ಸಿಬ್ಬಂದಿ ಶ್ರೇಯ, ಪೇಷಂಟ್ ಕೌನ್ಸಿಲರ್ ಚೈತ್ರ, ಆಂಬುಲೆನ್ಸ್ ಚಾಲಕ ವೆಂಕಟೇಶ ಉಪಸ್ಥಿತರಿದ್ದು, ಸಿಪಿಆರ್ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆಯನ್ನು ನೀಡಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ನಿರ್ದೇಶಕ ಗಣರಾಜ ಕುಂಬ್ಳೆ ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ ಅವರು ಇದ್ದರು. ಸಂಸ್ಥೆಯ ಯೋಗ ತರಬೇತಿದಾರ ಅಶೋಕ್ ಅಂಬಟ ಸಹಕಾರದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು. ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಮನ ಮಾತಾಜಿ  ಧನ್ಯವಾದ ಅರ್ಪಿಸಿದರು. ಭವಿತಾ ಮಾತಾಜಿ ನಿರೂಪಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.