PGCET-2026: ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

PGCET-2026: ಪಿಜಿಸಿಇಟಿ-2026ರ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕೆಇಎ ಇಂದು ಪ್ರಕಟಿಸಿದೆ.

Sep 25, 2026 - 19:05
PGCET-2026: ಮೊದಲ ಸುತ್ತಿನ ಸೀಟು ಹಂಚಿಕೆ ಅಂತಿಮ ಫಲಿತಾಂಶ ಪ್ರಕಟ

ಬೆಂಗಳೂರು: ಪಿಜಿಸಿಇಟಿ-2026ರ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಪ್ರಕಟಿಸಿದೆ.

ಒಟ್ಟು 23,164 ಸೀಟು ಈ ಸುತ್ತಿನಲ್ಲಿ ಹಂಚಿಕೆಯಾಗಿವೆ. ಎಂಬಿಎ ಕೋರ್ಸ್‌ಗೆ 11,462, ಎಂಸಿಎ ಕೋರ್ಸ್‌ಗೆ 8,093 ಹಾಗೂ ಎಂ.ಟೆಕ್ ಕೋರ್ಸ್‌ಗೆ 3,609 ಸೀಟುಗಳು ಹಂಚಿಕೆಯಾಗಿವೆ.

ಎಂಸಿಎಯಲ್ಲಿ 9,574, ಎಂಬಿಎನಲ್ಲಿ 2,195 ಹಾಗೂ ಎಂ.ಟೆಕ್ ಕೋರ್ಸ್‌ನಲ್ಲಿ 1,821 ಸೀಟುಗಳು ಹಂಚಿಕೆಯಾಗಿಲ್ಲ. ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ. 

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.