PGCET-2026: ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ಗಮನಿಸಿ

PGCET-2026: ಪಿಜಿಸಿಇಟಿ-2026 ಪರೀಕ್ಷೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಹತ್ವದ ವಿವರವನ್ನು ಪ್ರಕಟಿಸಿದೆ.

Sep 15, 2026 - 20:37
Sep 15, 2026 - 20:43
PGCET-2026: ಈ ಪರೀಕ್ಷೆ ಬರೆದ ವಿದ್ಯಾರ್ಥಿಗಳೇ ಗಮನಿಸಿ

ಬೆಂಗಳೂರು: ಪಿಜಿಸಿಇಟಿ-2026 (PGCET-2026) ಪರೀಕ್ಷೆ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ವಿವರವನ್ನು ಪ್ರಕಟಿಸಿದೆ. ಈ ಬಗ್ಗೆ 'ಎಕ್ಸ್'ನಲ್ಲಿಯೂ ಪೋಸ್ಟ್ ಮಾಡಿದೆ.  

ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂಆರ್ಚ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆ (ಆಪ್ಷನ್ಸ್) ದಾಖಲಿಸಲು ಸೆ.17 ರಂದು ಬೆಳಗ್ಗೆ‌ 9 ಗಂಟೆವರೆಗೆ ಅವಕಾಶ ನೀಡಲಾಗಿದೆ.

ಅಂದು ಸಂಜೆ 6ರ ನಂತರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಅವಶ್ಯ ಇದ್ದಲ್ಲಿ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳುವುದಕ್ಕೆ ಅಥವಾ ಹೊಸದಾಗಿ ಹಾಕಿಕೊಳ್ಳುವುದಕ್ಕೆ/ ತೆಗೆದುಹಾಕುವುದಕ್ಕೆ ಸೆ.19 ರಂದು ಬೆಳಗ್ಗೆ 11ರವರೆಗೆ ಸಮಯಾವಕಾಶವನ್ನು ಕೊಡಲಾಗಿದೆ.

ಸೆ.19 ರಂದು ಸಂಜೆ 5 ಕ್ಕೆತಾತ್ಕಾಲಿಕ ಹಾಗೂ ಸೆ.21 ರಂದು ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೆ.22 ರಿಂದ 24 ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿದವರು ಸೆ.25 ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್-1 ಆಯ್ಕೆ ಮಾಡಿದವರು ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.26 ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ತಿಳಿಸಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar TG ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.