ಪಿಲಿಕುಳ: ವಿಜ್ಞಾನ ಕೇಂದ್ರ ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನ
Pilikula: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ನಿರ್ದೇಶಕರ ಹುದ್ದೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 364 ದಿವಸಗಳಿಗೆ (1 ವರ್ಷ) ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ನ.28 ಕಡೆ ದಿನವಾಗಿದೆ. ಹೆಚ್ಚಿನ ಮಾಹಿತಿ ಅಥವಾ ಅರ್ಜಿ ನಮೂನೆಗೆ ಕಚೇರಿಯನ್ನು ಅಥವಾ ವೆಬ್‍ಸೈಟ್ https://pilikula.karnataka.gov.inಗೆ ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.