ಪಿಲಿಕುಳ ಕಂಬಳ ಮುಂದೂಡಿಕೆ

ಪಿಲಿಕುಳ ಕಂಬಳ

Nov 12, 2024 - 17:34
Feb 5, 2026 - 18:46
ಪಿಲಿಕುಳ ಕಂಬಳ ಮುಂದೂಡಿಕೆ

ಮಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ 

ಕಂಬಳೋತ್ಸವವನ್ನು ಮುಂದೂಡಲಾಗಿದೆ.

ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಆದೇಶದನ್ವಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆಯನ್ನು ನಡೆಸಲು ಘೋಷಿಸಿದ್ದು, ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 16ರಿಂದ 26ರವರೆಗೆ ಜಾರಿಯಲ್ಲಿರುತ್ತದೆ. ಅದರಂತೆ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನವೆಂಬರ್ 17 ಮತ್ತು 18 ರಂದು ಆಯೋಜಿಸಲು ಉದ್ದೇಶಿಸಲಾಗಿದ್ದ ಪಿಲಿಕುಳ ಕಂಬಳವನ್ನು ಮುಂದೂಡಲಾಗಿರುತ್ತದೆ. ಪಿಲಿಕುಳ ಕಂಬಳ ಆಯೋಜನೆಯ ಮುಂದೂಡಲಾದ ದಿನಾಂಕವನ್ನು ನಂತgದÀ ದಿನಗಳಲ್ಲಿ ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಕ ಪ್ರದೀಪ್ ಡಿ.ಸೋಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.