ಇಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ವಿವೇಕಾನಂದ ಸ್ಮಾರಕ ಉದ್ಘಾಟನೆ

PM Narendra Modi: ಪ್ರಧಾನಿ ನರೇಂದ್ರ ಮೋದಿ, ಇಂದು ಸಾಂಸ್ಕೃತಿಕ ನಗರಿಗೆ ಆಗಮಿಸುತ್ತಿದ್ದಾರೆ. ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ರಾಮಕೃಷ್ಣ ಆಶ್ರಮ ವತಿಯಿಂದ ನಿರ್ಮಿಸಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ (ವಿವೇಕ ಸ್ಮಾರಕ) ಲೋಕಾರ್ಪಣೆಗೊಳಿಸಲಿದ್ದಾರೆ.

Aug 1, 2026 - 10:05
Aug 1, 2026 - 10:12
ಇಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ವಿವೇಕಾನಂದ ಸ್ಮಾರಕ ಉದ್ಘಾಟನೆ

ಮೈಸೂರು: ಪ್ರಧಾನಿ ನರೇಂದ್ರ ಮೋದಿ (Narendra Modi), ಇಂದು ಸಾಂಸ್ಕೃತಿಕ ನಗರಿಗೆ ಆಗಮಿಸುತ್ತಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಮಧ್ಯಾಹ್ನ2.55ಕ್ಕೆ ಬಂದಿಳಿಯಲಿದ್ದು, ಅವರನ್ನು ಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸ್ವಾಗತಿಸಲಿದ್ದಾರೆ. 

ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ರಾಮಕೃಷ್ಣ ಆಶ್ರಮ ವತಿಯಿಂದ ನಿರ್ಮಿಸಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ (ವಿವೇಕ ಸ್ಮಾರಕ) ಲೋಕಾರ್ಪಣೆ ಹಾಗೂ ಯಾದವಗಿರಿಯ ಶ್ರೀ ರಾಮಕೃಷ್ಣ ವಿದ್ಯಾಶಾಲೆ ಮೈದಾನದಲ್ಲಿ ಜರುಗುವ ಸಾರ್ವಜನಿಕ ಸಮಾರಂಭದಲ್ಲೂ ಭಾಗವಹಿಸಲಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಹಲವು ಗಣ್ಯರ ಭಾಗಿ: ಬೇಲೂರು ರಾಮಕೃಷ್ಣ ಮಠದ ಸ್ವಾಮಿ ಗೌತಮಾನಂದಜಿ, ಮೈಸೂರು ರಾಮಕೃಷ್ಣ ಆಶ್ರಮದ ಸ್ವಾಮಿ ಮುಕ್ತಿದಾನಂದಜಿ,  ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದ ಯದುವೀರ್ ಒಡೆಯರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಹಲವರು ಗಣ್ಯರು ಪಾಲ್ಗೊಳ್ಳಲಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್: ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆ, ಮೈಸೂರು ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅವರು ಸಾಗುವ ಮಾರ್ಗದಲ್ಲಿ ಬ್ಯಾರಿಕೇಟ್ ಅಳವಡಿಕೆ ಮಾಡಲಾಗಿದ್ದು, 2,000 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಮುಖ ರಸ್ತೆಗಳಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ.

ವಿವೇಕ ಸ್ಮಾರಕ ನಿರ್ಮಾಣ ಏಕೆ:1892ರಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.