PNB: 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ

Punjab National Bank: ಪಂಜಾಬ್ ನ್ಯಾಷನಲ್ ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

Jul 22, 2026 - 15:00
Jul 22, 2026 - 15:00
PNB: 545 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗೆ ಅರ್ಜಿ

ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್-I ಅಡಿಯಲ್ಲಿ 'ಲೋಕಲ್ ಬ್ಯಾಂಕ್ ಆಫೀಸರ್' ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 

ಒಟ್ಟು 545 ಹುದ್ದೆಗಳನ್ನು ತುಂಬಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ 'ಪದವಿ' ವಿದ್ಯಾರ್ಹತೆಯನ್ನು ಹೊಂದಿರಬೇಕು. ಯಾವುದೇ ಶೆಡ್ಯೂಲ್ಡ್ ಕಮರ್ಷಿಯಲ್ ಬ್ಯಾಂಕ್/ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ನಲ್ಲಿ ಕ್ಲರ್ಕ್ ಅಥವಾ ಆಫೀಸರ್ ಹುದ್ದೆಯಲ್ಲಿ ಕನಿಷ್ಠ 1 ವರ್ಷದ ಕೆಲಸ ಮಾಡಿರಬೇಕು.

ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿಪಡಿಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ & ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯಿದೆ. ಆಯ್ಕೆಯಾದವರಿಗೆ ಮಾಸಿಕ ರೂ.48,480 ರಿಂದ ರೂ.85,920 ವೇತನ ಕೊಡಲಾಗುತ್ತದೆ. 

ಆಸಕ್ತ ಅಭ್ಯರ್ಥಿಗಳು ತಾವು ಅರ್ಜಿ ಹಾಕುವ ರಾಜ್ಯದ ಅಧಿಕೃತ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಹಾಗೂ ಮಾತನಾಡಲು ತಿಳಿದಿರಬೇಕು. 

ಕರ್ನಾಟಕದ ಬೆಂಗಳೂರು, ಹುಬ್ಬಳ್ಳಿ - ಧಾರವಾಡ, ಮೈಸೂರು, ಶಿವಮೊಗ್ಗ, ಮಂಗಳೂರು ಹಾಗೂ ಬೆಳಗಾವಿಯಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. 

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 9 ಕಡೆ ದಿನವಾಗಿದೆ. ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ ರೂ.1,180 ಹಾಗೂ  ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂ.59 ಶುಲ್ಕವಿದೆ. ಹೆಚ್ಚಿನ ಮಾಹಿತಿಗೆ https://pnb.bank.in/Recruitments.aspxಗೆ ಸಂಪರ್ಕಿಸಿರಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.