Poco X8 Power: ಪೊಕೊ ಎಕ್ಸ್8 ಪವರ್ ಫೋನ್ ಬಿಡುಗಡೆ.. ಬೆಲೆ ಎಷ್ಟು?
Poco X8 Power: ನೂತನ 'ಪೊಕೊ ಎಕ್ಸ್8 ಪವರ್' ಸ್ಮಾರ್ಟ್‌ಫೋನ್ ಶನಿವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ.
ನೂತನ ಪೊಕೊ ಎಕ್ಸ್8 ಪವರ್ (Poco X8 Power) ಸ್ಮಾರ್ಟ್‌ಫೋನ್ ಶನಿವಾರ ಅದ್ದೂರಿಯಾಗಿ ಬಿಡುಗಡೆಗೊಂಡಿದೆ. ಸೆ.11 ರಂದು ಮಧ್ಯಾಹ್ನ 12 ಗಂಟೆಗೆ 'ಫ್ಲಿಪ್‌ಕಾರ್ಟ್' ಮೂಲಕ ಗ್ರಾಹಕರ ಖರೀದಿಗೆ ಲಭ್ಯವಿದೆ.
ಇದು 8GB + 256 GB ಇಂಟರ್ನಲ್ ಸ್ಟೋರೇಜ್‌ನ್ನು ಒಳಗೊಂಡಿದೆ. ರೂ.32,999 ಬೆಲೆಯನ್ನು ಹೊಂದಿದೆ.
ಈ ಫೋನ್ 10,000mAh ಸಾಮರ್ಥ್ಯದ ಸಿಲಿಕಾನ್-ಕಾರ್ಬನ್ ಬ್ಯಾಟರಿ ಆಯ್ಕೆಯನ್ನು ಪಡೆದಿದೆ. ಇದು 229 ಗ್ರಾಂ ತೂಗುತ್ತದೆ. 100W ಹೈಪರ್‌ಚಾರ್ಜ್‌ನ್ನು ಬೆಂಬಲಿಸುತ್ತದೆ.
6.83-ಇಂಚಿನ ಫ್ಲಾಟ್ 1.5K AMOLED ಡಿಸ್‌ಪ್ಲೇಯನ್ನು ಪಡೆದಿದೆ. 120Hz ರಿಫ್ರೆಶ್ ರೇಟ್ ಮತ್ತು HDR10+ ಅನ್ನು ಪಡೆದಿದೆ. ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 5 ಪ್ರೊಸೆಸರ್‌ನ್ನು ತನ್ನದಾಗಿಸಿಕೊಂಡಿದೆ. ಯೆಲ್ಲೋ ಮತ್ತು ಬ್ಲ್ಯಾಕ್ ಬಣ್ಣಗಳೊಂದಿಗೂ ಸಿಗುತ್ತದೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.