ರಾಜಕೀಯ ಪ್ರೇರಿತ ಕೇಸ್ ವಾಪಸ್ ಪಡೆದಿದ್ದೇವೆ: ಪ್ರಿಯಾಂಕ್ ಖರ್ಗೆ ಸಮರ್ಥನೆ

Oct 11, 2024 - 10:30
ರಾಜಕೀಯ ಪ್ರೇರಿತ ಕೇಸ್ ವಾಪಸ್ ಪಡೆದಿದ್ದೇವೆ: ಪ್ರಿಯಾಂಕ್ ಖರ್ಗೆ ಸಮರ್ಥನೆ

ಬೆಂಗಳೂರು: 2022ರ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿರೋ ಸರ್ಕಾರದ ನಿರ್ಧಾರವನ್ನ ಸಚಿವ ಪ್ರಿಯಾಂಕ್ ಖರ್ಗೆ  ಸಮರ್ಥನೆ ಮಾಡಿಕೊಂಡಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ಪ್ರೇರಿತವಾಗಿ ದಾಖಲಿಸಿದ್ದ ಕೇಸ್ ವಾಪಸ್ ತೆಗೆದುಕೊಂಡಿದ್ದೇವೆ. ಕೆಲವು ಕೇಸ್‌ಗಳನ್ನು ಚರ್ಚೆ ಮಾಡಿ ವಾಪಸ್ ತೆಗೆದುಕೊಂಡಿದ್ದೇವೆ. ಗಲಭೆ ಪ್ರಕರಣಗಳಲ್ಲಿ ಇತರೆ ಆರೋಪಿಗಳು ಎಂದು ಸೇರಿಸಿರುತ್ತಾರೆ. ಹೀಗಾಗಿ ಅದರ ತನಿಖೆ ಮಾಡಿ ಪ್ರಕರಣಗಳನ್ನು ಹಿಂಪಡೆದಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದರು.ಸಿ.ಟಿ ರವಿ (C T Ravi) ಅವರ ಪ್ರಕರಣವನ್ನು ವಾಪಸ್ ತೆಗೆದುಕೊಂಡಿದ್ದೇವೆ. ಇದು ರಾಜಕೀಯ ಅಂತಾ ಅವರು ಹೇಳ್ತಾರಾ? ಹೇಳಲಿ ಅವರಿಗೆ ಏನು ಶಿಕ್ಷೆ ಆಗಬೇಕು ಆಗಲಿ. ಎಲ್ಲ ಕೇಸ್ ಪರಿಶೀಲನೆ ಮಾಡಲಾಗಿದೆ. ಸ್ಥಳೀಯರಿಂದ ಮಾಹಿತಿ ಪಡೆದು ಬಿ ರಿಪೋರ್ಟ್ ಹಾಕುತ್ತಿದ್ದೇವೆ ಎಂದು ಸರ್ಕಾರದ ನಿರ್ಧಾರವನ್ನ ಸಮರ್ಥನೆ ಮಾಡಿಕೊಂಡರು.  

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.