ತುಮಕೂರು & ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಪ್ರಸ್ತಾವನೆ
Defence Manufacturing Cluster: ಕಾಸ್ಮಿಕ್ ಬಿರ್ಲಾ ಗ್ರೂಪ್‌ನ ನಿಯೋಗ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಿತು.
ಬೆಂಗಳೂರು: ಕಾಸ್ಮಿಕ್ ಬಿರ್ಲಾ ಗ್ರೂಪ್‌ನ ನಿಯೋಗ ಇಂದು ಗಂಗಾ ನಿವಾಸದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ, ತುಮಕೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ರಕ್ಷಣಾ ಉತ್ಪಾದನಾ ಕ್ಲಸ್ಟರ್ ಸ್ಥಾಪಿಸುವ ಪ್ರಸ್ತಾವನೆಯನ್ನು ಸಲ್ಲಿಸಿತು.
ಸುಮಾರು 1,300 ಹೆಕ್ಟೇರ್ ಪ್ರದೇಶದಲ್ಲಿ ರೂ,16,000 ಕೋಟಿ ಅಂದಾಜು ಹೂಡಿಕೆಯಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಅಂತರರಾಷ್ಟ್ರೀಯ ತಂತ್ರಜ್ಞಾನ ಸಹಭಾಗಿತ್ವ, ಅತ್ಯಾಧುನಿಕ ಉತ್ಪಾದನಾ ಘಟಕಗಳ ಸ್ಥಾಪನೆ ಮತ್ತು ನುರಿತ ಉದ್ಯೋಗಾವಕಾಶಗಳ ಸೃಷ್ಟಿ ಈ ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ.
ಯೋಜನೆಯ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರವು ಸೂಕ್ತವಾಗಿ ಪರಿಶೀಲಿಸಲಿದೆ ಎಂದು ನಿಯೋಗಕ್ಕೆ ಭರವಸೆ ನೀಡಲಾಯಿತು.
ಕಾಸ್ಮಿಕ್ ಬಿರ್ಲಾ ಗ್ರೂಪ್‌ನ ನಿರ್ದೇಶಕ ಲಕ್ಷ್ಮಣ್ ಹಾಗೂ ಗ್ಲೋಬಲ್ ಟೆಕ್ನೋಲಜಿ ಸಂಸ್ಥೆಯ ಎಂಡಿ ಕಿಶೋರ್ ಮುಂತಾದವರು ಇದ್ದರು.