ಪುತ್ತೂರು: ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ 94ನೇ ವಾಯುಸೇನಾ ದಿನಾಚರಣೆ
Puttur: ಪುತ್ತೂರಿನ 'ಅಮರ್ ಜವಾನ್ ಜ್ಯೋತಿ ಸ್ಮಾರಕ'ದ ಬಳಿ ಈಚೆಗೆ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.
ಪುತ್ತೂರು: ಇಲ್ಲಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ & ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಸಹಯೋಗದಲ್ಲಿ ಪಟ್ಟಣದ 'ಅಮರ್ ಜವಾನ್ ಜ್ಯೋತಿ ಸ್ಮಾರಕ'ದ ಬಳಿ ಈಚೆಗೆ 94ನೇ ವಾಯುಸೇನಾ ದಿನಾಚರಣೆಯನ್ನು ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಅಧ್ಯಕ್ಷ ಅಮಲಾ ರಾಮಚಂದ್ರ ಮಾತನಾಡಿ, ದೇಶಕ್ಕಾಗಿ ಸೇವೆ ಸಲ್ಲಿಸುವುದು ಜೀವನದಲ್ಲಿ ಸಿಗುವ ಅಪೂರ್ವ ಅವಕಾಶ. ಸಾಹಸ, ಧೈರ್ಯ ಹಾಗೂ ದೇಶಸೇವೆಗೆ ವಾಯುಸೇನೆ ಉತ್ತಮ ಆಯ್ಕೆಯಾಗಿದೆ. ಆಧುನಿಕ ಕಾಲದ ಯುದ್ಧದಲ್ಲಿ ವಾಯುಸೇನೆಯ ಕೊಡುಗೆ ಅತ್ಯಂತ ಮಹತ್ವದ್ದು ಎಂದು ಹೇಳಿದರು.
ಸಾರ್ಜೆಂಟ್ ಪ್ರಕಾಶ್ ಕುಕ್ಕಾಜೆ ಮಾತನಾಡಿ, ವಾಯುಪಡೆ ಹಾಗೂ ಸಶಸ್ತ್ರ ಪಡೆಗಳಲ್ಲಿನ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು. ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸಾರ್ಜೆಂಟ್ ವಸಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮತ್ತು ಕರ್ನಲ್ ಡಿ.ಜಿ. ಭಟ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಅಂಬಿಕಾ ವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.