ಪುತ್ತೂರು: ಅಕ್ಷಯ ಕೆರಿಯರ್ ಅಕಾಡೆಮಿಯ ನೂತನ ಕಚೇರಿ ಉದ್ಘಾಟನೆ
Puttur: ಇಲ್ಲಿನ ದರ್ಬೆಯ ವಿಘ್ನೇಶ್ ಕಾಂಪ್ಲೆಕ್ಸ್‌ನ 2ನೇ ಮಹಡಿಯಲ್ಲಿ 'ಅಕ್ಷಯ ಕೆರಿಯರ್ ಅಕಾಡೆಮಿ'ಯ ನೂತನ ಕಚೇರಿ ಇಂದು ಶುಭಾರಂಭಗೊಂಡಿತು.
ಪುತ್ತೂರು: ಇಲ್ಲಿನ ದರ್ಬೆಯ ವಿಘ್ನೇಶ್ ಕಾಂಪ್ಲೆಕ್ಸ್‌ನ 2ನೇ ಮಹಡಿಯಲ್ಲಿ 'ಅಕ್ಷಯ ಕೆರಿಯರ್ ಅಕಾಡೆಮಿ'ಯ ನೂತನ ಕಚೇರಿ ಇಂದು ಶುಭಾರಂಭಗೊಂಡಿತು.
ಸಂಸ್ಥೆಯ ಅಧ್ಯಕ್ಷ ಜಯಂತ ನಡುಬೈಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. '2019ರಲ್ಲಿ 17 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡ ಸಂಸ್ಥೆಯು, ಪ್ರಸ್ತುತ ಸಾವಿರಾರು ವಿದ್ಯಾರ್ಥಿಗಳಿಗೆ ಶಿಕ್ಷಣ & ವೃತ್ತಿಪರ ತರಬೇತಿ ನೀಡುವ ಹಂತಕ್ಕೆ ಬೆಳೆದಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕವಾಗಿ ವಿವಿಧ ವೃತ್ತಿಪರ ತರಗತಿಗಳನ್ನು ಆರಂಭಿಸಲಾಗಿದೆ' ಎಂದು ಹೇಳಿದರು.
ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಯು.ಪಿ.ಶಿವಾನಂದ ದೀಪ ಬೆಳಗಿಸುವುದರೊಂದಿಗೆ, ಹೊಸ ಕಚೇರಿ ಉದ್ಘಾಟಿಸಿದರು. ಆ ಬಳಿಕ ಮಾತನಾಡಿ, 'ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ವಿಮಾನಯಾನ ಕ್ಷೇತ್ರಕ್ಕೆ ಸಂಬಂಧಿಸಿದ ತರಗತಿಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿರುವ 'ಅಕ್ಷಯ ಕೆರಿಯರ್ ಅಕಾಡೆಮಿ'ಯ ಪ್ರಯತ್ನ ಶ್ಲಾಘನೀಯ. ಪಟ್ಟಣವು ವೇಗವಾಗಿ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯಾಗಿ ರೂಪುಗೊಳ್ಳುವಂತಾಗಲಿ' ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, 'ಪ್ರಧಾನಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡುವುದು ಅಗತ್ಯ. ಏವಿಯೇಷನ್ ಮತ್ತು ಎಐ ಸೇರಿದಂತೆ ಭವಿಷ್ಯದಲ್ಲಿ ಹೆಚ್ಚಿನ ಬೇಡಿಕೆಯಿರುವ ಕ್ಷೇತ್ರಗಳಲ್ಲಿ ತರಬೇತಿ ನೀಡಿ, ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯ ಪ್ರಯತ್ನ ಮಹತ್ವದ್ದಾಗಿದೆ' ಎಂದು ತಿಳಿಸಿದರು.
ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಹೇಮನಾಥ್ ಶೆಟ್ಟಿ ಕಾವು ಮಾತನಾಡಿ, 'ವಿಮಾನಯಾನ ತರಬೇತಿ ಮೂಲಕ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ, ಉತ್ತಮ ಉದ್ಯೋಗಾವಕಾಶಗಳು ದೊರೆಯುವಂತಾಗಲಿ' ಎಂದು ಶುಭ ಹಾರೈಸಿದರು.
ಪುತ್ತಿಲ ಪರಿವಾರ ಟ್ರಸ್ಟ್‌ನ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, 'ಅಕ್ಷಯ ಶಿಕ್ಷಣ ಸಂಸ್ಥೆ ಮುಂದಿನ ದಿನಗಳಲ್ಲಿ ವಿಶ್ವವಿದ್ಯಾಲಯವಾಗಿ ಬೆಳೆಯಲಿ' ಎಂದರು.
ಹಿರಿಯ ಕ್ಯಾಬಿನ್-ಕ್ರೂ ದೀಪಶ್ರೀ, ಮಂಗಳೂರು ವಿಮಾನ ನಿಲ್ದಾಣದ ಮ್ಯಾನೇಜರ್ ಸಚಿನ್ ಮತ್ತು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು.
ವಿಘ್ನೇಶ್ ಕಾಂಪ್ಲೆಕ್ಸ್‌ನ ಮಾಲೀಕ ದಿನೇಶ್ ಪಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ಜಿಡೆಕಲ್ಲು ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಸುಬ್ಬಪ್ಪ ಕೈಕಂಬ ಹಾಗೂ ಪುತ್ತೂರು ಮಹಿಳಾ ಕಾಲೇಜಿನ ಪ್ರಾಂಶುಪಾಲ ನಂದ ಕಿಶೋರ್ ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ವಿದ್ಯಾರ್ಥಿಗಳು ಹಾಗೂ ಅಕ್ಷಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ - ಸಿಬ್ಬಂದಿ ಉಪಸ್ಥಿತರಿದ್ದರು.
ಅಕ್ಷಯ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅರ್ಪಿತ್ ವಂದಿಸಿದರು. ಕಾರ್ಯಕ್ರಮಕ್ಕೆ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ವೃಂದದವರು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.