ಪುತ್ತೂರು: ಅಕ್ಷಯ ಕಾಲೇಜು.. ಅಭಿಜ್ಞ ಎಜುಕೇಶನ್‌ನೊಂದಿಗೆ ಒಪ್ಪಂದ

Akshaya College: ಅಕ್ಷಯ ಕಾಲೇಜಿನ ಬೈಟ್ ಬ್ಲಿಟ್ಜ್-ಐಟಿ ಕ್ಲಬ್ & ಐಕ್ಯೂಎಸಿ ಜಂಟಿಯಾಗಿ ಅಭಿಜ್ಞ ಎಜುಕೇಶನ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದೆ.

Jul 30, 2026 - 16:24
Jul 30, 2026 - 16:26
ಪುತ್ತೂರು: ಅಕ್ಷಯ ಕಾಲೇಜು.. ಅಭಿಜ್ಞ ಎಜುಕೇಶನ್‌ನೊಂದಿಗೆ ಒಪ್ಪಂದ

ಪುತ್ತೂರು: ವಿದ್ಯಾರ್ಥಿಗಳಿಗೆ ಕೈಗಾರಿಕಾ ಅಗತ್ಯಕ್ಕೆ ತಕ್ಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಅಕ್ಷಯ ಕಾಲೇಜಿನ ಬೈಟ್ ಬ್ಲಿಟ್ಜ್ - ಐಟಿ ಕ್ಲಬ್ & ಐಕ್ಯೂಎಸಿ ಜಂಟಿಯಾಗಿ, ಅಭಿಜ್ಞ ಎಜುಕೇಶನ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದೇ ವೇಳೆ ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ಕುರಿತು ಓರಿಯೆಂಟೇಶನ್ ಕಾರ್ಯಕ್ರಮವು ಜರುಗಿತು.
 
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇನ್ಸ್ಪಿರಾಂಟೆ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಎಸ್ಇ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶಶಾಂಕ್ ಶೆಟ್ಟಿ ಮಾತನಾಡಿ,  ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ಕ್ಷೇತ್ರಗಳಲ್ಲಿ ಅಪಾರ ಉದ್ಯೋಗಾವಕಾಶಗಳಿವೆ. ತಾಂತ್ರಿಕ ಜ್ಞಾನದ ಜೊತೆಗೆ ಪ್ರಾಯೋಗಿಕ ಅನುಭವ ಹಾಗೂ ನಿರಂತರ ಕಲಿಕೆಯೇ ಯಶಸ್ಸಿನ ಗುಟ್ಟು ಎಂದು ಹೇಳಿದರು. 
ಅಧ್ಯಕ್ಷತೆ ವಹಿಸಿದ್ದ ಅಕ್ಷಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ ನಡುಬೈಲ್ ಮಾತನಾಡಿ, ಶಿಕ್ಷಣ ಮತ್ತು ಕೈಗಾರಿಕೆಯ ನಡುವಿನ ಅಂತರ ಕಡಿಮೆ ಮಾಡುವಲ್ಲಿ ಇಂತಹ ಒಡಂಬಡಿಕೆಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಸಹಭಾಗಿತ್ವದಿಂದ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಹಾಗೂ ಉದ್ಯೋಗಾವಕಾಶಗಳು ದೊರೆಯಲಿವೆ ಎಂದು ತಿಳಿಸಿದರು.
 
ಅಭಿಜ್ಞ ಎಜುಕೇಶನ್ ಸಂಸ್ಥಾಪಕ ಅಭಿಲಾಷ್ ಕ್ಷತ್ರಿಯ ಮಾತನಾಡಿ, ಈ ಒಪ್ಪಂದದಡಿ ವಿದ್ಯಾರ್ಥಿಗಳಿಗೆ ಎಐ, ಸೈಬರ್ ಭದ್ರತೆ ಮತ್ತು ಡೇಟಾ ಅನಾಲಿಟಿಕ್ಸ್ ವಿಷಯಗಳಲ್ಲಿ ವಿಶೇಷ ತರಬೇತಿ ನೀಡಲಾಗುವುದು. ಅದನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ನೀಡುವುದರೊಂದಿಗೆ ಇಂಟರ್ನ್‌ಶಿಪ್‌ ಮಾಡುವುದಕ್ಕೂ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು. 
ಈ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ ಮತ್ತು ಬಿಸಿಎ ವಿಭಾಗದ ಮುಖ್ಯಸ್ಥೆ ದೀಕ್ಷಾ ರೈ ಉಪಸ್ಥಿತರಿದ್ದರು.
ಲಾವಣ್ಯ ಪ್ರಾರ್ಥಿಸಿದರು. ಅಭಿಲಾಷ್ ಕ್ಷತ್ರಿಯ ಸ್ವಾಗತಿಸಿದರು. ಮುಖ್ಯ ಅತಿಥಿಯನ್ನು ದೀಕ್ಷಾ ರೈ  ಪರಿಚಯಿಸಿದರು. ಸುಪ್ರಭಾ ಕೆ ನಿರೂಪಿಸಿದರು. ಸರೋಶ್ ನಾಯಕ್ ವಂದನಾರ್ಪಣೆ ಮಾಡಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.