ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಲೇಡೀಸ್ ಕ್ಲಬ್ ಉದ್ಘಾಟನೆ & ಸಮಗ್ರ ಆರೋಗ್ಯದ ಕುರಿತು ಉಪನ್ಯಾಸ

Akshaya College: ಅಕ್ಷಯ ಕಾಲೇಜಿನಲ್ಲಿ ಲೇಡೀಸ್ ಕ್ಲಬ್ ಉದ್ಘಾಟನೆ ಹಾಗೂ ಸಮಗ್ರ ಆರೋಗ್ಯದ ಕುರಿತು ಉಪನ್ಯಾಸ ನಡೆಯಿತು.

Oct 8, 2026 - 17:28
ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ಲೇಡೀಸ್ ಕ್ಲಬ್ ಉದ್ಘಾಟನೆ & ಸಮಗ್ರ ಆರೋಗ್ಯದ ಕುರಿತು ಉಪನ್ಯಾಸ

ಪುತ್ತೂರು: ಅಕ್ಷಯ ಕಾಲೇಜಿನ ಲೇಡೀಸ್ ಕ್ಲಬ್, ಮಹಿಳಾ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ಲೇಡೀಸ್ ಕ್ಲಬ್ ಉದ್ಘಾಟನೆ & 'ಯುವಜನರಲ್ಲಿ ಸಮಗ್ರ ಆರೋಗ್ಯ' ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮವು ಈಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಅಕ್ಷಯ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಆ ಬಳಿಕ ಮಾತನಾಡಿ, ಯುವತಿಯರ ಸಬಲೀಕರಣ ಹಾಗೂ ಸುರಕ್ಷಿತ ಕ್ಯಾಂಪಸ್ ವಾತಾವರಣದ ಮಹತ್ವವನ್ನು ಒತ್ತಿ ಹೇಳಿದರು.

ಅಕ್ಷಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಆಧುನಿಕ ಸಮಾಜದಲ್ಲಿ ಮಹಿಳೆಯರು ತಮ್ಮ ಸುರಕ್ಷತೆಯ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಡಾ.ಸುಲೇಖಾ ವರದರಾಜ್, ಸಮಗ್ರ ಆರೋಗ್ಯದ ಕುರಿತು ಒಳನೋಟವುಳ್ಳ ಮಾತುಗಳನ್ನಾಡಿದರು. ಯುವಜನರು ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಅವಶ್ಯಕತೆ, ಒತ್ತಡ ನಿರ್ವಹಣೆ ಮತ್ತು ಆರೋಗ್ಯಕರ ಜೀವನಶೈಲಿಯ ಬಗ್ಗೆ ಪ್ರಾಯೋಗಿಕ ಸಲಹೆಗಳನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಅಕ್ಷಯ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ, ಐಕ್ಯೂಎಸಿ ಸಂಯೋಜಕಿ ರಶ್ಮಿ, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಲೇಡೀಸ್ ಕ್ಲಬ್‌ನ ಸಂಚಾಲಕಿ ಪಾವನ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸುಪ್ರಭಾ ಮುಖ್ಯ ಅತಿಥಿಯ ಪರಿಚಯ ಮಾಡಿದರು. ಮೇಘಾಶ್ರೀ ಸ್ವಾಗತಿಸಿದರು. ಸಿಂಧು ವಂದಿಸಿದರು. ಸ್ಪೂರ್ತಿ ನಿರೂಪಿಸಿದರು.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.