ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

Puttur: ಇಲ್ಲಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯನ್ನು ಸಂಭ್ರಮ - ಸಡಗರದಿಂದ ಆಚರಿಸಲಾಯಿತು.

Aug 16, 2026 - 13:46
ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಪುತ್ತೂರು: ಇಲ್ಲಿನ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯನ್ನು ಸಂಭ್ರಮ - ಸಡಗರದಿಂದ ಆಚರಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು.

ಭಾರತೀಯ ವಾಯುಸೇನೆಯ ನಿವೃತ್ತ ಸಾರ್ಜಂಟ್ ಸುರೇಶ್ ಕೆ.ಯು, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿ, ನಮ್ಮ ದೇಶ ಹೆಮ್ಮೆ ಪಡುವಂತೆ ಮಾಡಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ದೇಶದ ಭವಿಷ್ಯ ವಿದ್ಯಾರ್ಥಿಗಳ ಕೈಯಲ್ಲಿದ್ದು, ದೇಶಾಭಿಮಾನ ಬೆಳೆಸಿಕೊಂಡು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದರು. 

ಇದೇ ವೇಳೆ ಅವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನದ ಪ್ರಮಾಣವಚನ ಬೋಧಿಸಿದರು.

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷ ಜಯಂತ್ ನಡುಬೈಲು ಅವರು ಮಾತನಾಡಿ, ಸ್ವಾತಂತ್ರ್ಯವು ಪ್ರತಿಯೊಬ್ಬ ಮನುಷ್ಯನ ಹಕ್ಕಾಗಿದ್ದು, ಅದನ್ನು ಧನಾತ್ಮಕವಾಗಿ ಬಳಸಿಕೊಳ್ಳಬೇಕು. ಭಾರತ ಸದಾ ಸ್ವತಂತ್ರ ಮತ್ತು ಶಕ್ತಿಶಾಲಿ ರಾಷ್ಟ್ರವಾಗಿರಬೇಕಾದರೆ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಅಕ್ಷಯ ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಮಾತನಾಡಿ, ಸ್ವಾತಂತ್ರ್ಯವು ಸುಲಭವಾಗಿ ದೊರೆತದ್ದಲ್ಲ. ಇದರ ಹಿಂದೆ ಅನೇಕ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಹೋರಾಟವಿದೆ. ಅವರ ತ್ಯಾಗವನ್ನು ಸದಾ ಸ್ಮರಿಸಿ, ಆದರ್ಶಗಳನ್ನು ಜೀವನದಲ್ಲಿ ಪಾಲಿಸಬೇಕು ಎಂದರು. 

ಅರಣ್ಯ ಇಲಾಖೆಯ ನಿವೃತ್ತ ಅಧಿಕಾರಿ ಬಾಲಕೃಷ್ಣ ಮರೋಡಿ, ಆಡಳಿತ ಮಂಡಳಿ ಸದಸ್ಯ ನಾರಾಯಣ ಪಿ.ವಿ, ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಅಭಿಲಾಷ್ ಕ್ಷತ್ರಿಯ, ಕಾಲೇಜಿನ ಎನ್ಎಸ್ಎಸ್. ಘಟಕಗಳ ಯೋಜನಾಧಿಕಾರಿಗಳಾದ ರಾಕೇಶ್, ಗಂಧರ್ವ, ಉಪಪ್ರಾಂಶುಪಾಲ ರಕ್ಷಣ್ ಟಿ.ಆರ್, ಐಕ್ಯೂಎಸಿ ನಿರ್ದೇಶಕಿ ರಶ್ಮಿ, ಉಪನ್ಯಾಸಕ, ಉಪನ್ಯಾಸಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆ ಬಳಿಕ ಎನ್ಎಸ್ಎಸ್. ಘಟಕದಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿಗಳು ಉತ್ಸಾಹದಿಂದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಕಾಲೇಜಿನ ವಿದ್ಯಾರ್ಥಿ ನಾಯಕ ಸೂರ್ಯ ಸ್ವಾಗತಿಸಿದರು. ದೇವಿಕಾ ವಂದನಾರ್ಪಣೆ ಮಾಡಿದರು. ಗ್ರೀಷ್ಮಾ ನಿರೂಪಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.