Puttur: ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

Puttur: ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ, ಈಚೆಗೆ 'ಶ್ರೀಕೃಷ್ಣ ಜನ್ಮಾಷ್ಟಮಿ'ಯನ್ನು ಸಂಭ್ರಮದಿಂದ ಆಚರಿಸಲಾಯಿತು.

Sep 12, 2026 - 13:01
Puttur: ಅಂಬಿಕಾ ಸಿಬಿಎಸ್‌ಇ ವಿದ್ಯಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಸಿಬಿಎಸ್ಇ ವಿದ್ಯಾಲಯದಲ್ಲಿ, ಈಚೆಗೆ 'ಶ್ರೀಕೃಷ್ಣ ಜನ್ಮಾಷ್ಟಮಿ'ಯನ್ನು ಸಂಭ್ರಮದಿಂದ ಆಚರಿಸಲಾಯಿತು. 

ಕಾರ್ಯಕ್ರಮದ ಅಂಗವಾಗಿ 7ನೇ ತರಗತಿ ವಿದ್ಯಾರ್ಥಿಗಳು ಭಗವದ್ಗೀತೆಯ ಧ್ಯಾನ ಶ್ಲೋಕ ಪಠಣ ಮಾಡಿದರು. 9ನೇ ತರಗತಿ ವಿದ್ಯಾರ್ಥಿಗಳು ವಿಷ್ಣು ಸಹಸ್ರ ನಾಮ ಪಾರಾಯಣ ಪ್ರಸ್ತುತಪಡಿಸಿದರು. 

ಶ್ರೀಕೃಷ್ಣನ ವಿಗ್ರಹಕ್ಕೆ 8ನೇ ತರಗತಿಯ ವಿದ್ಯಾರ್ಥಿ ಶ್ರೀವತ್ಸ ಗಂಟೆಯ ನಾದ ಮತ್ತು ವಿಧಿ ವಿಧಾನದೊಂದಿಗೆ ಪೂಜೆ ನೆರವೇರಿಸಿದರು. ಜೊತೆಗೆ ಬಾಲ ರಾಧಾ- ಕೃಷ್ಣರಾಗಿ ಬಂದಿದ್ದ ಮಕ್ಕಳಿಗೆ ಆರತಿ ಬೆಳಗಲಾಯಿತು. ಶ್ರೀಕೃಷ್ಣನ ಕುರಿತಾದ ಹಾಡುಗಳ ಕುಣಿತ ಹಾಗೂ ಭಜನೆಯೊಂದಿಗೆ ವಿದ್ಯಾರ್ಥಿಗಳು ಗಮನ ಸೆಳೆದರು.

'ಶ್ರೀಕೃಷ್ಣ ಜನ್ಮಾಷ್ಟಮಿ'ಯ ಪ್ರಯುಕ್ತ ಆಯೋಜಿಸಿದ್ದ ಶ್ರೀಕೃಷ್ಣನ ಬಾಲಲೀಲೆಯ ಕಥೆ ಹೇಳುವುದು, ಶುಭಾಶಯ ಪತ್ರವನ್ನು ತಯಾರು ಮಾಡುವುದು, ಮೊಸರು ಕುಡಿಕೆ ಒಡೆಯುವ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ & ಬಹುಮಾನ ವಿತರಿಸಿ ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪೋಷಕರು ಸಹ ಭಾಗವಹಿಸಿದ್ದರು.

ವಿದ್ಯಾಲಯದ ಪ್ರಾಂಶುಪಾಲೆ ಮಾಲತಿ ಡಿ ಮತ್ತು ಉಪಪ್ರಾಂಶುಪಾಲೆ ಸುಜನಿ ಬೋರ್ಕರ್ ಅವರು ಉಪಸ್ಥಿತರಿದ್ದರು. ವಿದ್ಯಾರ್ಥಿ ಅಕ್ಷರ ಎ ಪ್ರಾರ್ಥಿಸಿದರು. ಸೌಪರ್ಣಿಕಾ ಎಸ್ ದಾನೇಗೊಂಡರ್ ಹಾಗೂ ಮಾನ್ಯಲಕ್ಷ್ಮಿ ಎನ್. ಪಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.