ಪುತ್ತೂರು: ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆನ್‌ಲೈನ್ ತರಗತಿಗಳಿಗೆ ಚಾಲನೆ

Puttur Ambika PU College: ಈಚೆಗೆ ಪುತ್ತೂರಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆನ್‌ಲೈನ್ ತರಗತಿಗಳಿಗೆ ಚಾಲನೆ ನೀಡಲಾಯಿತು.

Jul 28, 2026 - 12:03
ಪುತ್ತೂರು: ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆನ್‌ಲೈನ್ ತರಗತಿಗಳಿಗೆ ಚಾಲನೆ

ಪುತ್ತೂರು: ಸದ್ಯ ಕಾಲ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ನೀಟ್ & ಜೆಇಇಯಂತಹ ಪರೀಕ್ಷೆಗಳಿಗೆ ಉನ್ನತ ಮಟ್ಟದಲ್ಲಿ ಸಿದ್ಧತೆಗಳನ್ನು ನಡೆಸಬೇಕಾಗುತ್ತದೆ. ಆದ್ದರಿಂದ ಪ್ರತಿಯೊಂದು ದಿನ, ಗಂಟೆ ಹಾಗೂ ನಿಮಿಷವು ಅಮೂಲ್ಯ. ಪ್ರಾಕೃತಿಕ ಅನನುಕೂಲತೆಯಿಂದ ಘೋಷಣೆಯಾಗುವ ರಜಾದಿನಗಳಲ್ಲಿ ಆನ್‌ಲೈನ್ ತರಗತಿ ನಡೆಸಲು ತೀರ್ಮಾನಿಸಿರುವುದು ಉತ್ತಮ ವಿಚಾರ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಡಾ.ಎಚ್.ಮಾಧವ ಭಟ್ ಹೇಳಿದರು. 

ಇಲ್ಲಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ, ಮಳೆಯಿಂದಾಗಿ ಘೋಷಣೆಯಾಗುವ ರಜಾದಿನಗಳಲ್ಲಿ ನಡೆಸಲ್ಪಡುವ ಆನ್‌ಲೈನ್ ತರಗತಿಗಳಿಗೆ ಈಚೆಗೆ ಚಾಲನೆ ನೀಡಿ, ಮಾತನಾಡಿದರು.

ಆನ್‌ಲೈನ್ ತರಗತಿಯಿಂದ ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಿಂದ ದೂರವಾಗುವುದು ತಪ್ಪುತ್ತದೆ. ಸಮಯದ ಸದುಪಯೋಗ ಮತ್ತು ತಾಂತ್ರಿಕತೆಯ ಬಳಕೆ ಮೂಲಕ ಅವರಿಗೆ ಸ್ಪಂದಿಸುವುದು ಶ್ಲಾಘನೀಯ ಎಂದು ಹೇಳಿದರು.  

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಸಂಸ್ಥೆಯು ವಿದ್ಯಾರ್ಥಿಗಳ  ಪರವಾಗಿ ನಿಲ್ಲುತ್ತದೆ. ಕೋವಿಡ್ ವೇಳೆ, ಆನ್‌ಲೈನ್ ತರಗತಿಗಳನ್ನು ಪ್ರಾರಂಭಿಸಿದ ಹೆಗ್ಗಳಿಕೆಗೆ ಅಂಬಿಕಾ ಪಾತ್ರವಾಗಿತ್ತು. ಇದೀಗ, ಮಳೆಯಿಂದಾಗಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಅದೇ ಮಾದರಿಯನ್ನು ಅಳವಡಿಸಿಕೊಂಡಿದ್ದೇವೆ. ಇದರೊಂದಿಗೆ ವಿದ್ಯಾರ್ಥಿಗಳು ಚಟುವಟಿಕೆಯಿಂದ ಇರುವಂತೆ ಮಾಡಲಾಗುವುದು ಎಂದರು.  

ಅಂಬಿಕಾ ನೀಟ್ ಅಕಾಡೆಮಿ ಪ್ರಾಂಶುಪಾಲ ಕೆ.ಕಿಶೋರ್ ಉಪಸ್ಥಿತರಿದ್ದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಕಾರ್ಯಕ್ರಮ ನಿರ್ವಹಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.