ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಕುರಿತು ಸಮಗ್ರ ತನಿಖೆಗೆ ಮನವಿ

Puttur: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಕುರಿತು ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಘಟಕ ಒತ್ತಾಯಿಸಿದೆ.

Sep 29, 2026 - 20:19
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಕುರಿತು ಸಮಗ್ರ ತನಿಖೆಗೆ ಮನವಿ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇಗುಲದ ಆಡಳಿತ, ಆಸ್ತಿ ನಿರ್ವಹಣೆ, ಅಭಿವೃದ್ಧಿ ಕಾಮಗಾರಿಗಳು, ಹಣಕಾಸು ವ್ಯವಹಾರಗಳು & 2024-25ರ ಲೆಕ್ಕ ಪರಿಶೋಧನಾ ವರದಿಯಲ್ಲಿನ ಆಕ್ಷೇಪಣೆಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ, ಇಲ್ಲಿನ ಬಿಜೆಪಿ ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ಮುಜರಾಯಿ) ಇಲಾಖೆಗೂ ಮನವಿ ಸಲ್ಲಿಕೆ ಮಾಡಲಾಯಿತು.

ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ರಚನೆ, ಅದರ ಬ್ಯಾಂಕ್ ಖಾತೆ ಹಾಗೂ ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣದ ಲೆಕ್ಕಪತ್ರಗಳನ್ನು ಪರಿಶೀಲಿಸುವಂತೆ ಮನವಿಯಲ್ಲಿ ಕೋರಲಾಗಿದೆ. 

ದೇಗುಲದ ಜಮೀನಿನಲ್ಲಿದ್ದ ಮನೆಗಳು ಹಾಗೂ ನಾಗನಗುಡಿ, ಅಯ್ಯಪ್ಪಸ್ವಾಮಿ ಗುಡಿ, ನವಗ್ರಹ ಗುಡಿಗಳು ಸೇರಿದಂತೆ ವಿವಿಧ ಕಟ್ಟಡಗಳ ತೆರವು ಪ್ರಕ್ರಿಯೆಯಲ್ಲಿನ ಅನುಮತಿ ಬಗ್ಗೆಯೂ ತನಿಖೆ ನಡೆಸಿವಂತೆ ಒತ್ತಾಯಿಸಲಾಗಿದೆ.

ಅಲ್ಲದೆ, ದೇವಸ್ಥಾನದ ಆಭರಣಗಳು, ಚರ-ಸ್ಥಿರಾಸ್ತಿಗಳ ಭೌತಿಕ ಪರಿಶೀಲನೆ, ಬ್ಯಾಂಕ್ ಖಾತೆಗಳು ಹಾಗೂ ಹಣಕಾಸು ವ್ಯವಹಾರಗಳ ವಿಶೇಷ ಆಡಿಟ್ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. 

2024-25ರ ಆಡಿಟ್ ವರದಿಯಲ್ಲಿನ ಪ್ರತಿಯೊಂದು ಆಕ್ಷೇಪಣೆಗೆ 'ಆಕ್ಷನ್ ಟೇಕನ್ ರಿಪೋರ್ಟ್' ಸಿದ್ಧಪಡಿಸಬೇಕು. ಯಾವುದೇ ಹಣಕಾಸು ಅಥವಾ ಆಡಳಿತಾತ್ಮಕ ಅಕ್ರಮಗಳು ದೃಢಪಟ್ಟರೆ, ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.