ಪುತ್ತೂರು: ಗಿರಿಜಾ ಕಲ್ಯಾಣೋತ್ಸವದ ಚಪ್ಪರ ಮಹೂರ್ತ

Puttur: ಗಿರಿಜಾ ಕಲ್ಯಾಣೋತ್ಸವದ ಚಪ್ಪರ ಮಹೂರ್ತವು ಶನಿವಾರ ನೆರವೇರಿತು.

Nov 28, 2026 - 20:55
Nov 28, 2026 - 20:55
ಪುತ್ತೂರು: ಗಿರಿಜಾ ಕಲ್ಯಾಣೋತ್ಸವದ ಚಪ್ಪರ ಮಹೂರ್ತ

ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ಗಿರಿಜಾ ಕಲ್ಯಾಣೋತ್ಸವ ಸಮಿತಿ ಸಹಯೋಗದಲ್ಲಿ ಪ್ರಪ್ರಥಮ ಬಾರಿಗೆ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇಗುಲದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಚಪ್ಪರ ಮುಹೂರ್ತ ಶನಿವಾರ ನೆರವೇರಿತು.

ಪುರೋಹಿತ ಜಯರಾಮ ಭಟ್, ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.  ಆ ಬಳಿಕ ಉದಯ ಭಟ್ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಹಿರಿಯರಾದ ಸೇಡಿಯಾಪು ಜನಾರ್ದನ ಭಟ್ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಮರುವಾಳ, ಪ್ರಜ್ವಲ್ ಘಾಟೆ, ಕೋಶಾಧಿಕಾರಿ ಸುಜಿತ್ ಕಜೆ, ಆರ್.ಕೆ.ಭಟ್ ಮೂಡಬಿದ್ರೆ, ಗಿರಿಜಾ ಕಲ್ಯಾಣೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಅನಿಲ್ ಕುಮಾರ್ ಕಣ್ಣಾರ್ನೂಜಿ, ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ, ಸಹ ಸಂಚಾಲಕ ಉಮೇಶ್ ಕೋಡಿಬೈಲು, ಸಹ ಸಂಘಟನಾ ಕಾರ್ಯದರ್ಶಿಗಳಾದ ಪ್ರಶಾಂತ್ ನೆಕ್ಕಿಲಾಡಿ, ಮನೀಶ್ ಕುಲಾಲ್ ಸೇರಿದಂತೆ ಟ್ರಸ್ಟ್ ಹಾಗೂ ಸಮಿತಿಯ ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು ಉಪಸ್ಥಿತರಿದ್ದರು.

ಸೀತಾ ಪರಿವಾರದ ಅಧ್ಯಕ್ಷೆ ಪ್ರೇಮಾ ರಾಧಾಕೃಷ್ಣ ರೈ, ಪದಾಧಿಕಾರಿಗಳಾದ ಅನ್ನಪೂರ್ಣ ಬಲ್ಲಾಲ್, ಸ್ವಯಂಪ್ರಭಾ, ಅನ್ನಪೂರ್ಣ ಎಸ್.ಕೆ.ರಾವ್, ಪುಷ್ಪ ರಾಜೇಶ್, ವೀಣಾ ಪರ್ಲಡ್ಕ, ಸ್ವಾತಿ ರಕ್ತೇಶ್ವರಿ ವಠಾರ ಸೇರಿದಂತೆ ಹಲವಾರು ಸದಸ್ಯರು ಭಾಗವಹಿಸಿದ್ದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.