ಪುತ್ತೂರು ದೀಪೋತ್ಸವಕ್ಕೆ ಭರದ ಪೂರ್ವಸಿದ್ಧತೆ: ದೀಪೋತ್ಸವ ಕಾರ್ಯಾಲಯ ಉದ್ಘಾಟನೆ

Puttur: ಪುತ್ತೂರು ದೀಪೋತ್ಸವಕ್ಕೆ ಭರದಿಂದ ಸಿದ್ಧತೆ ನಡೆಯುತ್ತಿದ್ದು, ದೀಪೋತ್ಸವ ಕಾರ್ಯಾಲಯವನ್ನು ಉದ್ಘಾಟನೆ ಮಾಡಲಾಗಿದೆ.

Nov 26, 2026 - 14:14
Nov 26, 2026 - 14:15
ಪುತ್ತೂರು ದೀಪೋತ್ಸವಕ್ಕೆ ಭರದ ಪೂರ್ವಸಿದ್ಧತೆ: ದೀಪೋತ್ಸವ ಕಾರ್ಯಾಲಯ ಉದ್ಘಾಟನೆ

ಪುತ್ತೂರು: ದೀಪೋತ್ಸವ ಸಮಿತಿ ಹಾಗೂ ಮಹಾಲಿಂಗೇಶ್ವರ ದೇಗುಲದ ಸಹಯೋಗದಲ್ಲಿ ಡಿ.8 ರಂದು, ದೇವರಮಾರು ಗದ್ದೆಯಲ್ಲಿ ನಡೆಯಲಿರುವ 'ಪುತ್ತೂರು ದೀಪೋತ್ಸವ'ದ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿವೆ. ಇದರ ಅಂಗವಾಗಿ ಬುಧವಾರ ದೀಪೋತ್ಸವದ ಕಾರ್ಯಾಲಯ ಉದ್ಘಾಟನಾ ಸಮಾರಂಭ ಜರುಗಿತು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ದೀಪೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಸ್ವಾಗತಿಸಿದರು. ದೀಪೋತ್ಸವದ ಉದ್ದೇಶ ಹಾಗೂ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಪ್ರಾಸ್ತಾವಿಕವಾಗಿ ಮಾಹಿತಿ ನೀಡಿದರು.

ಕಾರ್ಯಾಲಯವನ್ನು ಮಂಗಳೂರಿನ ಕಟೀಲು ಲಾಜಿಸ್ಟಿಕ್ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಉದ್ಘಾಟಿಸಿ, ಶುಭಹಾರೈಸಿದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎಸ್.ರವೀಂದ್ರ ಶೆಟ್ಟಿ ನುಳಿಯಾಲು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ನಡೆಯಲಿರುವ ಅದ್ದೂರಿ ದೀಪೋತ್ಸವಕ್ಕೆ ಪುತ್ತೂರು ಸಾಕ್ಷಿಯಾಗಬೇಕು ಎಂಬ ಉದ್ದೇಶದಿಂದ ಈ ವಿಶಿಷ್ಟ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರವು ಅತ್ಯಗತ್ಯ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದೆ. ಭಕ್ತರನ್ನು ಸಂಪರ್ಕಿಸಿ, ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಹ್ವಾನಿಸುವ ಕಾರ್ಯವು ನಡೆಯುತ್ತಿದೆ. ದೀಪೋತ್ಸವದ ಎಲ್ಲಾ ಸಿದ್ಧತೆಗಳು ಯಶಸ್ವಿಯಾಗಿ ಸಾಗುತ್ತಿದೆ ಎಂದರು. 

ಈ ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಬಿ.ಎಲ್, ವಿಜಯ ಬ್ಯಾಂಕ್ ನಿವೃತ್ತ ಎಂಜಿನಿಯರ್ ಜಗಜೀವನದಾಸ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ಸೋಣಾಲು ಮತ್ತು ಪುತ್ತೂರು ದೇವಸನ್ನಿಧಾನದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೌರವ ಸಲಹೆಗಾರ ಹರಿಕಾಕ್ಷಿ ಜೆ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ದೀಪೋತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು. ಎಸ್.ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ.ರಾಜೇಶ್ ಬೆಜ್ಜಂಗಳ ಹಾಗೂ ಸುಜಿರ್ ಕುಮಾರ್ ಶೆಟ್ಟಿ ಸಹಕರಿಸಿದರು.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.