ಧರ್ಮಾಭ್ಯುದಯ - ಧರ್ಮ ಶಿಕ್ಷಣ ತಾಲೂಕು ಸಮಿತಿಯಿಂದ ಶೃಂಗೇರಿಗೆ ಭೇಟಿ

Puttur: ಇಲ್ಲಿನ ತಾಲೂಕು ಧರ್ಮಾಭ್ಯುದಯ - ಧರ್ಮ ಶಿಕ್ಷಣ ಸಮಿತಿ‌ ವತಿಯಿಂದ, ಶೃಂಗೇರಿ ಶಾರದಾಂಬಾ ದೇಗುಲ ಮತ್ತು ಶಾರದಾ ಪೀಠಕ್ಕೆ ಈಚೆಗೆ ಭೇಟಿ ನೀಡಲಾಯಿತು.

Sep 25, 2026 - 17:19
ಧರ್ಮಾಭ್ಯುದಯ - ಧರ್ಮ ಶಿಕ್ಷಣ ತಾಲೂಕು ಸಮಿತಿಯಿಂದ ಶೃಂಗೇರಿಗೆ ಭೇಟಿ

ಪುತ್ತೂರು: ಇಲ್ಲಿನ ತಾಲೂಕು ಧರ್ಮಾಭ್ಯುದಯ - ಧರ್ಮ ಶಿಕ್ಷಣ ಸಮಿತಿ‌ ವತಿಯಿಂದ, ಶೃಂಗೇರಿ ಶಾರದಾಂಬಾ ದೇಗುಲ ಮತ್ತು ಶಾರದಾ ಪೀಠಕ್ಕೆ ಈಚೆಗೆ ಭೇಟಿ ನೀಡಲಾಯಿತು. 

ಚಾತುರ್ಮಾಸ್ಯ ವ್ರತಾಚರಣೆಯಲ್ಲಿ‌ ನಿರತರಾಗಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಧಾನಂ ಅವರ ಆಶೀರ್ವಾದ ಹಾಗೂ ಮಂತ್ರಾಕ್ಷತೆಯನ್ನು ಪಡೆದುಕೊಳ್ಳಲಾಯಿತು.

ಈ ವೇಳೆ ತಾಲೂಕು ಧರ್ಮಾಭ್ಯುದಯ ಸಮಿತಿಯ ಅಧ್ಯಕ್ಷ ದಂಬೆಕಾನ ಸದಾಶಿವ ರೈ, ಪ್ರಧಾನ‌ ಕಾರ್ಯದರ್ಶಿ ಬಾಲಕೃಷ್ಣ ಬೋರ್ಕರ್, ಸಂಚಾಲಕ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ಶೈಲೇಶ್ ಜಿ ರಾವ್, ವಿವಿಧ ಗ್ರಾಮ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. 

ಶೃಂಗೇರಿ ಪೀಠದ ಶ್ರೀ ಶಾಂಕರ ತತ್ವ ಪ್ರಸಾರ ಅಭಿಯಾನದ ರಾಜ್ಯ ಸಂಚಾಲಕ ವಿದ್ವಾನ್ ತೇಜಶಂಕರ ಸೋಮಯಾಜಿ ಸಹಕರಿಸಿದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

ಸಂಜಯ್ ಅಂಬೇಕರ್ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.