ಪುತ್ತೂರು: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Puttur: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕ್ಯಾಂಪಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ - ಸಡಗರದಿಂದ ನಡೆಯಿತು.

Aug 17, 2026 - 09:25
ಪುತ್ತೂರು: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ನೂತನ ಕ್ಯಾಂಪಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ - ಸಡಗರದಿಂದ ನಡೆಯಿತು. 

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಯೋಧ ಜೋ ಡಿಸೋಜ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.

'ನಮ್ಮ ಹಿರಿಯರು ತ್ಯಾಗ ಹಾಗೂ ಬಲಿದಾನಗಳಿಂದ ಈ ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆ. ಇದು ಕೇವಲ ಆಚರಣೆಯಲ್ಲ. ಅದನ್ನು ಗೌರವದಿಂದ ಉಳಿಸಿಕೊಂಡು ಹೋಗುವುದು, ಇಂದಿನ ಯುವ ಜನಾಂಗದ ಪವಿತ್ರ ಕರ್ತವ್ಯ' ಎಂದು ಹೇಳಿದರು. 

ಕಾಲೇಜಿನ ಪ್ರಾಂಶುಪಾಲ ಪ್ರೊ.ನಂದಕಿಶೋರ್ ಎಸ್ ಅವರು ಮಾತನಾಡಿ, 'ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದಲ್ಲ. ನಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಉತ್ತಮ ಜ್ಞಾನ ಮತ್ತು ಕೌಶಲ್ಯ ಮೈಗೂಡಿಸಿಕೊಂಡು, ತಮ್ಮ ಕಾಲಮೇಲೆ ತಾವು ನಿಂತು ಸ್ವಾವಲಂಬಿಗಳಾದಾಗ ಮಾತ್ರ ನಿಜವಾದ ಸ್ವಾತಂತ್ರ್ಯ ಅನುಭವಿಸಲು ಸಾಧ್ಯ' ಎಂದರು.

ಉಪನ್ಯಾಸಕ ಡಾ.ಎವರೆಸ್ಟ್ ರೊಡ್ರಿಗಸ್, ಪ್ರೊ.ಪದ್ಮನಾಭ, ಡಾ.ಚಂದ್ರಶೇಖರ, ಡಾ.ರವಿಚಂದ್ರ, ಪ್ರೊ.ಹರೀಶ್ ನಾಯಕ್ ಹಾಗೂ ಎಲ್ಲ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. 

ವಿದ್ಯಾರ್ಥಿನಿಯರಿಂದ ದೇಶಭಕ್ತಿ ಬಿಂಬಿಸುವ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.