ಪುತ್ತೂರು: ಸರ್ಕಾರಿ ವೈದ್ಯಕೀಯ ಕಾಲೇಜು.. ಶೀಘ್ರ ಅನುದಾನ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

Puttur Government Medical College: ಇಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಶುರುವಾಗಿವೆ. ರಾಜ್ಯ ಸರ್ಕಾರವು ನಿಗಧಿಪಡಿಸಿದ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಿ, ಸಹಕಾರ ನೀಡುವಂತೆ ಶಾಸಕ ಅಶೋಕ್ ರೈ, ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿ, ಮನವಿ ಮಾಡಿದ್ದಾರೆ.

Jul 15, 2026 - 21:23
ಪುತ್ತೂರು: ಸರ್ಕಾರಿ ವೈದ್ಯಕೀಯ ಕಾಲೇಜು.. ಶೀಘ್ರ ಅನುದಾನ ಬಿಡುಗಡೆಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಇಲ್ಲಿ ನಿರ್ಮಾಣವಾಗುತ್ತಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಶುರುವಾಗಿವೆ. ರಾಜ್ಯ ಸರ್ಕಾರವು ನಿಗಧಿಪಡಿಸಿದ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಿ, ಸಹಕಾರ ನೀಡುವಂತೆ ಶಾಸಕ ಅಶೋಕ್ ರೈ ವೈದ್ಯಕೀಯ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮುಹ್ಸಿನ್, ಆರ್ಥಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ವಿಶಾಲ್ ಆರ್ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಅಪರ ಕಾರ್ಯದರ್ಶಿ ಶೋಭಾ ಅವರಿಗೆ ಮನವಿ ಮಾಡಿದ್ದಾರೆ.

ಇಂದು (ಬುಧವಾರ) ಮೂವರು ಅಧಿಕಾರಿಗಳನ್ನು ಭೇಟಿಯಾಗಿ ಶಾಸಕರು ಮಾತುಕತೆ ನಡೆಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರ ಪ್ರಮುಖ ಬೇಡಿಕೆಯಾದ ಮೆಡಿಕಲ್ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಒಂದು ಹಂತದ ಕಾಮಗಾರಿ ನಿಗದಿತ ಜಾಗದಲ್ಲಿ ಶುರುವಾಗಿದೆ. 2027ರಲ್ಲಿ ಕಾಲೇಜು ಪ್ರಾರಂಭವಾಗಲಿದ್ದು, ಈಗಾಗಲೇ ಸಿದ್ದತೆಗಳು ನಡೆಯುತ್ತಿವೆ. ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆಗೂ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ನೂತನ ವೈದ್ಯಕೀಯ ಕಾಲೇಜು ಪ್ರಾರಂಭವಾಗುವ ವೇಳೆಗೆ, ಕಟ್ಟಡದ ನಿರ್ಮಾಣ ಕಾಮಗಾರಿಯೂ ಆರಂಭವಾಗಬೇಕಿದ್ದು, ಇದಕ್ಕೆ ಸರ್ಕಾರ ನಿಗದಿಪಡಿಸಿದ ಅನುದಾನವನ್ನು ಶೀಘ್ರ ಮಂಜೂರು ಮಾಡಬೇಕಾಗಿದೆ. ಅನುದಾನ ಬಿಡುಗಡೆಯಾದ ನಂತರ, ಮುಖ್ಯಮಂತ್ರಿಗಳು ಪುತ್ತೂರು ವೈದ್ಯಕೀಯ ಕಾಲೇಜಿಗೆ ಶಿಲಾನ್ಯಾಸ ಮಾಡಲಿದ್ದಾರೆ. ಸದ್ಯ ಕಾಲೇಜಿಗೆ ಸಂಬಂಧಪಟ್ಟ ಕಡತಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಮೂಲಕವೇ ಸರ್ಕಾರಕ್ಕೆ ತಲುಪಬೇಕಿದೆ. ಈ ನಿಟ್ಟಿನಲ್ಲಿ ಇಲಾಖೆಯ ಮೂಲಕ ಕಡತಗಳು ವಿಲೇವಾರಿಯಾಗುವುದರೊಂದಿಗೆ, ಅನುದಾನದ ಮಂಜೂರಿಗೂ ಸಹಕಾರ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ವೈದ್ಯಕೀಯ ಕಾಲೇಜಿನ ಕೆಲಸಗಳು ಸಮರೋಪಾದಿಯಲ್ಲಿ ನಡೆಯಬೇಕೆಂಬ ಉದ್ದೇಶದಿಂದ ಸಚಿವರು ಮತ್ತು ಸಂಬಂದಪಟ್ಟ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಎಂದು ಶಾಸಕರು ತಿಳಿಸಿದ್ದಾರೆ.