ಪುತ್ತೂರು: ಭಾರೀ ಮಳೆ.. ಧರೆಗುರುಳಿದ ಮರ, ವಾಹನ ಸಂಚಾರ ಅಸ್ತವ್ಯಸ್ತ
Puttur: ಪರ್ಪುಂಜ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಇಂದು (ಮಂಗಳವಾರ) ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಪರ್ಪುಂಜ ಸಮೀಪ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಇಂದು (ಮಂಗಳವಾರ) ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಉರುಳಿ ಬಿದ್ದಿದ್ದು, ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಅನಿರೀಕ್ಷಿತವಾಗಿ ಧರೆಗುರುಳಿದ ಮರದಿಂದಾಗಿ, ರಸ್ತೆಯಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗಳು, ಸರಕು ಸಾಗಣೆ ಲಾರಿಗಳು ಮತ್ತು ಖಾಸಗಿ ವಾಹನಗಳು ಅಲ್ಲೇ ನಿಂತುಕೊಂಡವು. ಮುಂಜಾಗ್ರತಾ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು.

ಘಟನಾ ಸ್ಥಳಕ್ಕೆ ತಕ್ಷಣವೇ ಮೆಸ್ಕಾಂ ಸಿಬ್ಬಂದಿ ಧಾವಿಸಿದ್ದು, ಸ್ಥಳೀಯರ ನೆರವಿನಿಂದ ಮರವನ್ನು ಕತ್ತರಿಸಿ, ತೆರವುಗೊಳಿಸಿದರು. ಆ ಬಳಿಕ ವಿದ್ಯುತ್ ತಂತಿ ಸರಿಪಡಿಸಿ, ಹೆದ್ದಾರಿಯಲ್ಲಿ ವಾಹನ ಸಂಚಾರ ಸುಗಮಗೊಳಿಸಲಾಯಿತು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.