ಪುತ್ತೂರು: ಪತ್ರಕರ್ತರ ಸಂಘದ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ
Puttur: ಕರ್ನಾಟಕ ಪತ್ರಕರ್ತರ ಸಂಘ'ದ ತಾಲೂಕು ಘಟಕಕ್ಕೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಂಗಣದಲ್ಲಿ'ಕರ್ನಾಟಕ ಪತ್ರಕರ್ತರ ಸಂಘ'ದ ತಾಲೂಕು ಘಟಕಕ್ಕೆ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮಂಗಳವಾರ ವಿಜೃಂಭಣೆಯಿಂದ ನಡೆಯಿತು.
ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಈ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. 'ಸಮಾಜದ ಅಭಿವೃದ್ಧಿ, ಜನಜಾಗೃತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವಲ್ಲಿ ಮಾಧ್ಯಮದ ಪಾತ್ರ ಅತ್ಯಂತ ಮಹತ್ವದಿಂದ ಕೂಡಿದೆ' ಎಂದು ಹೇಳಿದರು.

ಈ ವೇಳೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಹಾಗೂ 4 ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸುದ್ದಿ ಬಿಡುಗಡೆಯ ಪ್ರಸರಣ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿರುವ ಜಯರಾಮ್ ಭಟ್ ಸಂಪಾಜೆ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ರಾಜ್ಯಮಟ್ಟದ ನಾಡಪ್ರಭು ಕೇಂಪೇಗೌಡರ ಪ್ರಶಸ್ತಿ ಪುರಸ್ಕೃತರಾದ ಪುತ್ತೂರಿನ ಎಸ್‌ಆರ್‌ಕೆ ಲಾಡರ್ಸ್‌ನ ಮಾಲೀಕರಾದ ಕೇಶವ ಅಮೈ ಅವರನ್ನು ಕೂಡ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸುದ್ದಿ ಬಿಡುಗಡೆ ಪುತ್ತೂರು ಸಿಇಒ ಸೃಜನ್ ಊರುಬೈಲು, ಕರ್ನಾಟಕ ಪತ್ರಕರ್ತರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುದೇಶ್ ಕುಮಾರ್, ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಸುಧಾಕರ ಸುವರ್ಣ, ಸಂಘದ ಕಾನೂನು ಸಲಹೆಗಾರ ಕೃಷ್ಣಪ್ರಸಾದ್ ನಡ್ಸಾರ್, ಪುತ್ತೂರು ತಾಲೂಕು ಘಟಕದ ಸ್ಥಾಪಕ ಅಧ್ಯಕ್ಷ ಉಮೇಶ್ ಮಿತ್ತಡ್ಕ, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ಶರತ್ ಕುಮಾರ್ ಪಾರ, ಉಪಾಧ್ಯಕ್ಷೆ ಸುಮಿತ್ರಾ ಬಿ ನಾಯ್ಕ್, ಪ್ರಧಾನ ಕಾರ್ಯದರ್ಶಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿ ಚಿತ್ರಾಂಗಿನಿ ಸತ್ಯಪ್ರಕಾಶ್, ಸಂಘಟನಾ ಕಾರ್ಯದರ್ಶಿ ಪ್ರಶಾಂತ್ ಮಿತ್ತಡ್ಕ, ಜತೆ ಕಾರ್ಯದರ್ಶಿ ದಿನೇಶ್ ಬಡಗನ್ನೂರು, ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೆ, ವಿವಿಧ ಮಾಧ್ಯಮದ ಪತ್ರಕರ್ತರು ಹಾಗೂ ಗಣ್ಯರು ಭಾಗವಹಿಸಿದ್ದರು.