ಖೋಖೋ ಪಂದ್ಯಾವಳಿ: ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ
Vivekananda PU College: ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ, ವಿವೇಕಾನಂದ ಪಿಯು ಕಾಲೇಜಿನ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಪುತ್ತೂರು: ಪುಣಚದ ಶ್ರೀದೇವಿ ವಿದ್ಯಾಕೇಂದ್ರದಲ್ಲಿ ಈಚೆಗೆ ನಡೆದ ವಿದ್ಯಾಭಾರತಿ ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿಯಲ್ಲಿ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಅತ್ಯುತ್ತಮ ಪ್ರದರ್ಶನ ನೀಡಿದೆ. ಈ ಮೂಲಕ ಪ್ರಥಮ ಸ್ಥಾನ ಪಡೆದಿದ್ದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಪ್ರಥಮ ಪಿಯು ವಿದ್ಯಾರ್ಥಿಗಳಾದ ಶಶಾಂಕ್, ಚಂದನ್ , ದಿಶಾಲ್ ಎ, ಉದಯ್, ತುಶಾನ್ ಎ, ತರುಣ್ ಎ ರೈ ,ಪ್ರದ್ವಿತ್ ರೈ ಎಂ, ಯಶ್ವಿನ್ ಬಿ, ಜೀವಿತ್, ಎಸ್.ಡಿ.ಮಸಾಲಿ, ಪೃಥ್ವಿರಾಜ್.ಜಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ತರುಣ್ ಕುಮಾರ್ ಬಿ.ಆರ್, ದೇಶ್ಚಿತ್ ಎಸ್, ಘನಶ್ಯಾಮ್, ಲಿಖಿತ್, ಕೀರ್ತನ್, ಸಾತ್ವಿಕ್, ಮನ್ವಿತ್ ವಿಜೇತ ತಂಡದ ಭಾಗವಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರವಿಶಂಕರ್, ಡಾ.ಜ್ಯೋತಿ ಹಾಗೂ ಯತೀಶ್ ಮಾರ್ಗದರ್ಶನ ನೀಡಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.