DD Chandana: 'ಹಲೋ ಗೆಳೆಯರೇ' ಲೈವ್ ಫೋನ್-ಇನ್‌ನಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ ಭಾಗಿ
DD Chandana: ದೂರದರ್ಶನ ಡಿಡಿ ಚಂದನದ 'ಹಲೋ ಗೆಳೆಯರೇ' ಲೈವ್ ಫೋನ್-ಇನ್‌ನಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.
ದಕ್ಷಿಣ ಕನ್ನಡ: ದೂರದರ್ಶನ ಡಿಡಿ ಚಂದನದ 'ಹಲೋ ಗೆಳೆಯರೇ' ಲೈವ್ ಫೋನ್-ಇನ್‌ನಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ (KrishnaPrasad Nadsar) ಅತಿಥಿಯಾಗಿ ಭಾಗವಹಿಸುತ್ತಿದ್ದು, ಅಲ್ಲಿ 'ಮಾನವ ಕಳ್ಳಸಾಗಾಣಿಕೆ ತಡೆ' ಕುರಿತು ವಿಶೇಷ ಮಾಹಿತಿ ನೀಡಲಿದ್ದಾರೆ. ನಾಳೆ (ಗುರುವಾರ) 12 ರಿಂದ 1 ಗಂಟೆವರೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದೆ.
ಅವರು 'ಅನಿಕೇತನ ಎಜುಕೇಶನಲ್ ಟ್ರಸ್ಟ್'ನ ಆಡಳಿತ ಟ್ರಸ್ಟಿ ಮತ್ತು ಕಾನೂನು-ಕೌಶಲ್ಯ ತರಬೇತುದಾರರು ಆಗಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳು & ಪೋಷಕರು, ವಿವಿಧ ಸಂಘ ಸಂಸ್ಥೆಗಳು, ಮಹಿಳಾ ಪರ ಸಂಘಟನೆಗಳ ಸದಸ್ಯರು, ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ನೂರಾರು ಕಾನೂನು ಅರಿವು ತರಬೇತಿ ಕಾರ್ಯಾಗಾರಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.
'ಮಾನವ ಕಳ್ಳಸಾಗಾಣಿಕೆ ತಡೆ' ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಪುತ್ತೂರು ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಸೇರಿದಂತೆ ಹಲವು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಬೆಂಗಳೂರು ಆಕಾಶವಾಣಿಯಲ್ಲಿಯೂ ಕಾನೂನು ಅರಿವು ಕಾರ್ಯಕ್ರಮಗಳಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದಾರೆ.
ನಿಮ್ಮಲ್ಲಿ ಯಾವುದೇ ಪ್ರಶ್ನೆಗಳಿದ್ದರೂ ನಾಳಿನ ಕಾರ್ಯಕ್ರಮಕ್ಕೆ ಕರೆ ಮಾಡಿ, ಕೃಷ್ಣಪ್ರಸಾದ್ ನಡ್ಸಾರ್ ಅವರಲ್ಲಿ ಉತ್ತರಗಳನ್ನು ಪಡೆಯಬಹುದು. ಸಂಪರ್ಕ ಸಂಖ್ಯೆ: 080-23542599, 23542699.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್, ಯೂಟ್ಯೂಬ್, ನ್ಯೂಸ್ ಆಪ್‌ವರೆಗೆ ಎಲ್ಲ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.