ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Puttur: ಇಲ್ಲಿನ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಶಾಖೆಯಲ್ಲಿ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯನ್ನು ಸಂಭ್ರಮದಿಂದ ಆಚರಿಸಲಾಯಿತು.

Aug 15, 2026 - 14:37
Aug 15, 2026 - 14:37
ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ಇಲ್ಲಿನ ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಶಾಖೆಯಲ್ಲಿ 80ನೇ 'ಸ್ವಾತಂತ್ರ್ಯ ದಿನಾಚರಣೆ'ಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮವನ್ನು ಸ್ಮರಿಸಿದರು. 

ಯುವಜನತೆ ಜವಾಬ್ದಾರಿಯುತ ನಾಗರಿಕರಾಗಿ, ರಾಷ್ಟ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು. ಈ ವೇಳೆ ಸಂಸ್ಥೆಯ ಸಿಬ್ಬಂದಿ ವರ್ಗದವರಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಕೃಷ್ಣ ನಾರಾಯಣ ಮುಳಿಯ ಅವರು ಮಾತನಾಡಿ, ಸ್ವಾತಂತ್ರ್ಯ ನಂತರ ಭಾರತವು ವಿವಿಧ ಕ್ಷೇತ್ರಗಳಲ್ಲಿ ಸಾಧಿಸಿರುವ ಪ್ರಗತಿ ಹಾಗೂ ಅಭಿವೃದ್ಧಿಯ ಪಯಣವನ್ನು ಸ್ಮರಿಸಿದರು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಅಶ್ವಿನಿ ಕೃಷ್ಣ ಮುಳಿಯ ಉಪಸ್ಥಿತರಿದ್ದರು. ಸಂಸ್ಥೆಯ ಶಾಖಾ ಪ್ರಬಂಧಕ ರಾಘವೇಂದ್ರ ಪಟೇಲ್ ಮತ್ತು ಎಲ್ಲಾ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು. ಎಲ್ಲರಿಗೂ ಸಿಹಿ ಹಂಚಲಾಯಿತು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.

Sanjay Ambekar ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, 9 ವರ್ಷ ಅನುಭವವನ್ನು ಹೊಂದಿದ್ದೇನೆ. ಸದ್ಯ 'ಡೇ2ಡೇ ನ್ಯೂಸ್'ನಲ್ಲಿ ಕೆಲಸ ಮಾಡುತ್ತಿದ್ದೇನೆ.