ನರಿಮೊಗರು ಗ್ರಾ.ಪಂ ಎದುರಿಗೆ ಪುತ್ತಿಲ ಪರಿವಾರದಿಂದ ಪ್ರತಿಭಟನೆ

Puttur: ನರಿಮೊಗರು ಗ್ರಾಮ ಪಂಚಾಯಿತಿ ಮುಂಭಾಗ, ಇಂದು (ಗುರುವಾರ) ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭಗೊಳ್ಳದ ಹಿನ್ನೆಲೆ ಪುತ್ತಿಲ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Jul 30, 2026 - 14:23
Jul 30, 2026 - 14:36
ನರಿಮೊಗರು ಗ್ರಾ.ಪಂ ಎದುರಿಗೆ ಪುತ್ತಿಲ ಪರಿವಾರದಿಂದ ಪ್ರತಿಭಟನೆ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯಿತಿ ಮುಂಭಾಗ, ಇಂದು (ಗುರುವಾರ) ರಸ್ತೆ ದುರಸ್ತಿ ಕಾಮಗಾರಿ ಪ್ರಾರಂಭಗೊಳ್ಳದ ಹಿನ್ನೆಲೆ ಪುತ್ತಿಲ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯಂತೆ ಪೊಲೀಸರು ಭದ್ರತೆ ಕಲ್ಪಿಸಿದ್ದಾರೆ.  

ಸಂಸ್ಥಾಪಕ ಅರುಣ್ ಪುತ್ತಿಲ, ಅಧ್ಯಕ್ಷ ಶ್ರೀರಾಮ ಪಾತಳ ಸೇರಿದಂತೆ ಪರಿವಾರದ ಕಾರ್ಯಕರ್ತರು, ರಿಕ್ಷಾ ಚಾಲಕರು ಹಾಗೂ ಸ್ಥಳೀಯರು ಮುಷ್ಕರದಲ್ಲಿ ಭಾಗವಹಿಸಿದ್ದಾರೆ.

ಪುರುಷರಕಟ್ಟೆ-ಶಾಂತಿಗೋಡು ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ, ಪುತ್ತಿಲ ಪರಿವಾರದ ಕಾರ್ಯಕರ್ತರು ಮಾಯಂಗಳದಲ್ಲಿ ರಸ್ತೆ ತಡೆ ನಡೆಸಿ, ಈಚೆಗೆ ಪ್ರತಿಭಟನೆ ನಡೆಸಿದ್ದರು. ಎರಡು ದಿನಗಳ ಗಡುವನ್ನು ಕೊಟ್ಟಿದ್ದರು.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.